ಡಿಕೆಶಿ ಯಾವುದೇ ತಪ್ಪು ಮಾಡಿಲ್ಲಾ ಎಂದಾದರೆ ತನಿಖೆ ಎದುರಿಸಲಿ ;ಈಶ್ವರಪ್ಪ
Team Udayavani, Oct 8, 2020, 6:20 PM IST
ರಾಯಚೂರು: ಹಿಂದೆ ಬಿ.ಎಸ್.ಯಡಿಯೂರಪ್ಪರ ಮೇಲೂ ಆರೋಪ ಕೇಳಿ ಬಂದಾಗ ಅವರು ಜೈಲಿಗೆ ಹೋಗಿ ನಿರ್ದೋಷಿಯಾಗಿ ಹೊರಬಂದಿದ್ದರು. ಅವರಂತೆ ಡಿ.ಕೆ. ಶಿವಕುಮಾರ್ ಕೂಡ ತಪ್ಪು ಮಾಡದಿದ್ದಲ್ಲಿ ನಿರ್ದೋಷಿಯಾಗಿ ಬರಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲೆಸೆದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ. ಶಿವಕುಮಾರ್ ಯಾವುದೇ ತಪ್ಪು ಮಾಡಿಲ್ಲ, ಸೀತೆಯಷ್ಟೆ ಪವಿತ್ರ ಎನ್ನುವುದಾದರೆ ತನಿಖೆ ಎದುರಿಸಲಿ. ಈ ಹಿಂದೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆದಾಗ ಹವಾಲಾ ಹಣ, ಅಕ್ರಮ ದಾಖಲೆಗಳು ದೊರಕಿದ್ದವು. ಆಗ ಜೈಲಿಗೆ ಹೋಗಿ ಬಂದಿದ್ದರು. ಈಗ ಪುನಃ ದಾಳಿಯಾಗಿದೆ. ಈಗಲೂ ಹಣ, ದಾಖಲೆಗಳು ದೊರಕಿವೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿಯವರ ಮೇಲೆ ಸಿಬಿಐ ದಾಳಿ ನಡೆದರೆ ಅದು ರಾಜಕೀಯ ಅಲ್ಲ. ಈಗ ಕಾಂಗ್ರೆಸ್ನವರ ಮೇಲೆ ದಾಳಿಯಾದರೆ ಮಾತ್ರ ಹೇಗೆ ರಾಜಕೀಯ ಪ್ರೇರಿತವಾಗುತ್ತದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ :ಆದಿಲ್ಶಾಹಿ ಕಾಲದ ನೀರು ಪೂರೈಕೆಯ ಗಾರೆ ಕೊಳವೆ ಪತ್ತೆ
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸೌಲಭ್ಯ ಹಿಂದಿನಿಂದಲೂ ಚರ್ಚೆಯಲ್ಲಿದೆ. ವಾಲ್ಮೀಕಿ ಸಮಾಜಕ್ಕೆ ನೀಡಿದ ಮೀಸಲಾತಿಯನ್ನು ಕುರುಬರು ಕಸಿಯುವುದಿಲ್ಲ. ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಬದ್ಧ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ವರದಿ ಕೂಡ ಸಲ್ಲಿಕೆಯಾಗಿದೆ. ಕುರುಬ ಸಮಾಜಕ್ಕೆ ಎಸ್ಟಿ
ಮೀಸಲಾತಿ ಕೊಡಬೇಕು ಎನ್ನುವ ಕೂಗಿಗೆ ಸ್ವಾಮೀಜಿಗಳು ನೇತೃತ್ವ ವಹಿಸಿದ್ದಾರೆ. ಹಿಂದುಳಿದ ಸಮಾಜಕ್ಕೆ ಮೀಸಲಾತಿ
ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದ್ದು, ಅದಕ್ಕೆ ನನ್ನ ಬೆಂಬಲವಿದೆ ಎಂದರು.
ಗ್ರಾಪಂ ಚುನಾವಣೆಗೆ ಸರ್ಕಾರ ಸಿದ್ಧವಿದೆ. ಆದರೆ, ಜನ ಚುನಾವಣೆಗೆ ಸಿದ್ಧರಿಲ್ಲ. ಕೊರೊನಾ ವೇಳೆ ಚುನಾವಣೆ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ತಜ್ಞರು ಕೂಡ ಚುನಾವಣೆ ಬೇಡ ಎನ್ನುತ್ತಿದ್ದಾರೆ ಎಂದರು. ಮಾಸ್ಕ್ ಧರಿಸದಿದ್ದಲ್ಲಿ ದಂಡ ಹಾಕಲು ವಿರೋಧ ಬರುತ್ತಿರುವ ಕಾರಣ ದಂಡದ ಮೊತ್ತ ಕಡಿಮೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.