ನನಗೆ ಮಂತ್ರಿ ಸ್ಥಾನ ಬೇಡ ಎಂದ ಕೆ.ಎಸ್ ಈಶ್ವರಪ್ಪ

Team Udayavani, Feb 3, 2023, 8:58 PM IST

ನನಗೆ ಮಂತ್ರಿ ಸ್ಥಾನ ಬೇಡ ಎಂದ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ಸಂಪುಟ ವಿಸ್ತರಣೆ ಸಾಧ್ಯತೆ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಶಸ್ತ್ರತ್ಯಾಗಕ್ಕೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ “ನನಗೆ ಮಂತ್ರಿ ಸ್ಥಾನ ಬೇಡ ‘ ಎಂದು ಘೋಷಿಸಿದ್ದು ಅವರ ನಿರ್ಧಾರ ಕುತೂಹಲ ಮೂಡಿಸಿದೆ.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಯಾರಿಗೂ ಕನಸು ಬಿದ್ದಿರಲಿಲ್ಲ .ಅವರು ಮಲಗಿದ್ದು ಒಂದು ಕಡೆ, ಪತ್ರ ಸಿಕ್ಕಿದ್ದು ಮತ್ತೊಂದು ಕಡೆ. ಆದರೂ ನನ್ನ ಮೇಲೆ ಆರೋಪ ಬಂತು. ತನಿಖೆ ಬಳಿಕ ಕ್ಲೀನ್‌ ಚಿಟ್‌ ಸಿಕ್ಕಿದೆ. ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಗೆ ನಾನು ಮನವಿ ಮಾಡಿದ್ದು, ಅವರು ಭರವಸೆ ಕೊಟ್ಟಿದ್ದೂ ನಿಜ. ಆದರೆ ಈಗ ಅವರಿಗೆ ಏನೇನು ಸಮಸ್ಯೆ ಇದೆಯೋ ಗೊತ್ತಿಲ್ಲ. ಇಂದು ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ಬೇಡ ಎಂದು ಹೇಳಿ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ತಾವು ತಿಹಾರ್‌ ಜೈಲಿಗೆ ಹೋಗಿದ್ದು ಏಕೆ ಎಂಬುದನ್ನು ಶಿವಕುಮಾರ್‌ ಮೊದಲು ನೆನಪು ಮಾಡಿಕೊಳ್ಳಲಿ. ಇಡಿ, ಐಟಿ, ಸಿಬಿಐ ತನಿಖೆ ಯಾಕೆ ನಡೆಯುತ್ತಿದೆ ಎಂದು ಹೇಳಲಿ. ಭ್ರಷ್ಟಾಚಾರ, ಅಕ್ರಮ ಹಣ ವಿಚಾರವಾಗಿ ಈ ತನಿಖೆ ನಡೆಯುತ್ತಿರುವುದಲ್ಲವೇ? ಅವರ ನಿವಾಸದಲ್ಲಿ ಕಂತೆ ಕಂತೆ ನೋಟು ಸಿಕ್ಕಿರಲಿಲ್ಲವೇ? ಈಗ ಬಸ್‌ ಯಾತ್ರೆ ವೇಳೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.

ಸಿಡಿ ಪ್ರಕರಣ ಸಿಬಿಐಗೆ ವಹಿಸುವಂತೆ ರಮೇಶ್‌ ಜಾರಕಿಹೊಳಿ ಮಾಡುತ್ತಿರುವ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿ, ಈಗ ಒಂದು ಸಿಡಿ ಬಂದಿದೆ.ಅದೆಷ್ಟು ಸಿಡಿಗಳಿವೆಯೋ? ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಬೇಕಿದೆ. ರಮೇಶ್‌ ಜಾರಕಿಹೊಳಿ ಸಿಬಿಐ ತನಿಖೆ ಕೇಳುವುದರಲ್ಲಿ ತಪ್ಪೇನಿಲ್ಲ ಎಂದರು.

ಶಿವಮೊಗ್ಗ ಕ್ಷೇತ್ರದ ಟಿಕೆಟ್‌ಗಾಗಿ ಆಯನೂರು ಮಂಜುನಾಥ್‌ ಪ್ರಚಾರ ನಡೆಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಯನೂರು ಮಂಜುನಾಥ್‌ ನಮ್ಮ ಪಕ್ಷದ ನಾಯಕರು.

ಸಂಸದೀಯ ಪಟು. ಟಿಕೆಟ್‌ ಕೇಳಿದ್ದರಲ್ಲಿ ತಪ್ಪಿಲ್ಲ. ಅಂತಿಮವಾಗಿ ಪಕ್ಷ ಯಾರಿಗೆ ಟಿಕೆಟ್‌ ಕೊಡುತ್ತದೆಯೋ, ಅವರ ಪರವಾಗಿ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.