KSRTC: “8 ಸಾವಿರ ಹೊಸ ಬಸ್ ಖರೀದಿ; 8 ಸಾವಿರ ಸಿಬಂದಿ ನೇಮಕ”: ರಾಮಲಿಂಗಾರೆಡ್ಡಿ
Team Udayavani, Oct 31, 2023, 11:55 PM IST
ವಿಜಯಪುರ: ರಾಜ್ಯದ ಮಹಿಳೆಯರಿಗೆ ಸರಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಯೋಜನೆಯಿಂದ ಅನುಕೂಲ ಆಗಿದೆ. ಆದರೂ ಬಿಜೆಪಿ ನಾಯಕರು ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಿಳೆಯರ ಉಚಿತ ಪ್ರಯಾಣ ಸೇವೆ ನೀಡಿದರೂ ಸಾರಿಗೆ ಸಂಸ್ಥೆ ಸಿಬಂದಿಗೆ ನಾವು ಸರಿಯಾಗಿ ವೇತನ ನೀಡುತ್ತಿದ್ದೇವೆ. ಬರುವ 4-5 ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಬಸ್ ಓಡಾಟ ನಡೆಸಲಿವೆ. 8 ಸಾವಿರ ಸಿಬಂದಿ ನೇಮಕಾತಿ ಆಗಲಿದೆ. ರದ್ದಾಗಿರುವ ಸಾರಿಗೆ ಸಂಚಾರ ಶೆಡ್ನೂಲ್ ಪುನರಾರಂಭ ಆಗಲಿವೆ. ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರಕಾರ ಇದ್ದಾಗ ಒಂದೂ ಹೊಸ ಬಸ್ ಖರೀದಿ ಮಾಡಲಿಲ್ಲ. ಅ ಧಿಕಾರದ ಕೊನೆಯಲ್ಲಿ ಹೊಸ ಬಸ್ ಖರೀದಿಗೆ ತೀರ್ಮಾನಿಸಿದರೂ ಅನುಷ್ಠಾನಕ್ಕೆ ತರಲಿಲ್ಲ. ನಮ್ಮ ಸರಕಾರದಲ್ಲಿ ಹೊಸ ಬಸ್ ಬರುತ್ತಿವೆ ಎಂದರು.
ಕೋವಿಡ್ ಸಂಕಷ್ಟದ ಸಮಯದಲ್ಲಿ 3800 ಶೆಡ್ನೂಲ್ ರದ್ದು ಮಾಡಲಾಗಿತ್ತು. ಹೀಗಾಗಿ ಚಾಲಕರ ಕೊರತೆ ಆಗುತ್ತದೆ. ಹಳೆ ಬಸ್ ಗುಜರಿಗೆ ಹಾಕುತ್ತೇವೆ, ಹೊಸ ಬಸ್ ಬಂದಿಲ್ಲ. 5500 ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ. ಈಗಾಗಲೇ 13,800 ಹೊಸ ಬಸ್ ಖರೀದಿಗೆ ಅನುಮತಿ ಕೇಳಿದ್ದು, 8 ಸಾವಿರ ಬಸ್ ಖರೀದಿಗೆ ಅನುಮತಿ ದೊರಕಿದೆ. ಖರೀದಿ ಪ್ರಕ್ರಿಯೆ ಆರಂಭವಾಗಿದೆ. 13,888 ಸಾರಿಗೆ ಇಲಾಖೆಯ ನೌಕರರು ನಿವೃತ್ತಿ ಹೊಂದಿದ್ದರು. ನಾನು 2013ರಲ್ಲಿ ಮಂತ್ರಿ ಇದ್ದಾಗ ನೇಮಕಾತಿ ಮಾಡಿರೋದು ಬಿಟ್ಟರೆ ಮತ್ತೆ ನೇಮಕಾತಿ ಆಗಿಲ್ಲ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸಾರಿಗೆ ಸಂಸ್ಥೆಯ ಸಿಬಂದಿಗೆ ಸರಿಯಾಗಿ ವೇತನ ಕೊಟ್ಟಿಲ್ಲ. ಮಹಿಳೆಯರ ಉಚಿತ ಪ್ರಯಾಣ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ 2800 ಕೋಟಿ ರೂ. ಘೋಷಿಸಿದ್ದಾರೆ. ಪ್ರತಿ ತಿಂಗಳು ಅಗತ್ಯ ಅನುದಾನ ನೀಡುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.