KSRTC: ನೌಕರರ ವೈದ್ಯ ತಪಾಸಣೆಗೆ ಒಡಂಬಡಿಕೆ
-ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ, ಸಂಶೋಧನಾ ಸಂಸ್ಥೆಯೊಂದಿಗೆ ಒಪ್ಪಂದ
Team Udayavani, Nov 2, 2023, 9:33 PM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ತನ್ನ ಸಿಬ್ಬಂದಿಗೆ ಸುಮಾರು ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಮುಂದಿನ ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
ನಿಗಮದಲ್ಲಿ ಒಟ್ಟು ಅಂದಾಜು 34 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಆ ಪೈಕಿ 24,686 ಚಾಲಕ ಮತ್ತು ನಿರ್ವಾಹಕರಾಗಿದ್ದಾರೆ. ನಿಗಮದ ನೌಕರರ ಕಾರ್ಯಸ್ವರೂಪ, ಜೀವನಶೈಲಿ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ/ಹೃದಯ ಸಂಬಂಧಿ ಕಾಯಿಲೆಗಳು ತೀರಾ ಸಾಮಾನ್ಯವಾಗಿವೆ. ಈ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಹೃದಯ ಸಂಬಂಧಿ ಹತ್ತು ಇತರೆ ವೈದ್ಯಕೀಯ ತಪಾಸಣೆಗಳನ್ನು ನೌಕರರಿಗೆ ಮಾಡಿಸಲು ತೀರ್ಮಾನಿಸಿದೆ. ಮುಂದಿನ ಐದು ವರ್ಷಗಳ ಅವಧಿಯ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಗುರುವಾರ ಈ ಒಪ್ಪಂದಕ್ಕೆ ಎರಡೂ ಸಂಸ್ಥೆಗಳು ಪರಸ್ಪರ ಸಹಿ ಹಾಕಿದವು. ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ಸಾಕ್ಷಿಯಾದರು.
ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಒಡಂಬಡಿಕೆಯಿಂದ ಹೃದಯ ಸಂಬಂಧಿ ತಪಾಸಣೆಗಳನ್ನು/ ಪರೀಕ್ಷೆಗಳನ್ನು ನಿರಂತರವಾಗಿ ಮಾಡಿಸಲಾಗುತ್ತದೆ. ಸಂಭವನೀಯ ಹೃದಯಾಘಾತ ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಜೀವಗಳ ರಕ್ಷಣೆ ಆಗುತ್ತದೆ ಎಂದು ತಿಳಿಸಿದರು.
ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಮಾತನಾಡಿ, ಇನ್ಮುಂದೆ ಸಿಬ್ಬಂದಿಯ ಹೃದಯ ಸಂಬಂಧಿ ಕಾಯಿಲೆಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡುವ ಜವಾಬ್ದಾರಿ ನಮ್ಮ ಸಂಸ್ಥೆಯ ಮೇಲಿದೆ. ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಪ್ರತ್ಯೇಕ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ನಮ್ಮ ಸಂಸ್ಥೆಯ ಮೈಸೂರಿನ ಕೇಂದ್ರದಲ್ಲಿಯೂ ಅಲ್ಲಿಗೆ ಸಮೀಪವಿರುವ ವಿಭಾಗಗಳ ಸಿಬ್ಬಂದಿ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನುºಕುಮಾರ್ ಮಾತನಾಡಿ, 40 ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಈ ಯೋಜನೆಯು ಉಪಯೋಗವಾಗಲಿದೆ. ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು 1,200 ರೂ.ಗಳನ್ನು ಅಂದರೆ ವಾರ್ಷಿಕ 2.55 ಕೋಟಿ ರೂ.ಗಳನ್ನು ಜಯದೇವ ಆಸ್ಪತ್ರೆಗೆ ಪಾವತಿ ಮಾಡುತ್ತದೆ. ಈ ಯೋಜನೆಯು ಅಂದಾಜು ಶೇ. 62 ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಿಗಮದಲ್ಲಿ ಸೇವೆಯಲ್ಲಿ ಇರುವಾಗ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಸಿಬ್ಬಂದಿ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆ ಅಡಿ ಒಂದು ಕೋಟಿ ಪರಿಹಾರ ಮೊತ್ತವನ್ನು ವಿತರಿಸಲಾಯಿತು. ಈ ವಿಶೇಷ ವಿಮಾ ಯೋಜನೆ ಬಗ್ಗೆ ಡಾ.ಸಿ.ಎನ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.