KSRTC: ತನಿಖೆಗೆ ನಿವೃತ್ತ ಜಡ್ಜ್‌ಗಳ ನೇಮಕ
Team Udayavani, Aug 22, 2023, 11:33 PM IST
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳು ನಿವೃತ್ತ ಸಿವಿಲ್ ಹಾಗೂ ಜಿಲ್ಲಾ ನ್ಯಾಯಾಧೀಶರನ್ನು ಅಥವಾ ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ತನಿಖಾಧಿಕಾರಿಗಳನ್ನಾಗಿ ನೇಮಕ ಮಾಡಿಕೊಳ್ಳಬಹುದೆಂದು ಹೈಕೋರ್ಟ್ ಆದೇಶಿಸಿದೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಇಕೆಆರ್‌ಟಿಸಿ) (ಈಗ ಕೆಕೆಆರ್‌ಟಿಸಿ)ಯ ಸಿಬಂದಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶಿಸ್ತು ಕ್ರಮದ ತನಿಖೆಗೆ ನಿವೃತ್ತ ಸಿವಿಲ್ ಹಾಗೂ ಜಿಲ್ಲಾ ನ್ಯಾಯಾಧೀಶರ ಮತ್ತು ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ನೇಮಕ ಮಾಡಿಕೊಂಡಿದ್ದ ಎನ್‌ಕೆಆರ್‌ಟಿಸಿ ಕ್ರಮವನ್ನು ಎತ್ತಿಹಿಡಿದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬಂದಿ (ನಡವಳಿಕೆ ಮತ್ತು ಶಿಸ್ತು) ನಿಯಮಾವಳಿ 1971ರ ನಿಯಮ 23(2)ರಲ್ಲಿ ಪ್ರಾಧಿಕಾರ ಎನ್ನುವ ಪದ ಬಳಕೆ ಮಾಡಲಾಗಿದೆ ಎನ್ನುವ ಕಾರಣಕ್ಕೆ ಸಾರಿಗೆ ನಿಗಮದ ಅಧಿಕಾರಿಯನ್ನು ಬಿಟ್ಟು ಬೇರೆಯವರನ್ನು ನೇಮಕ ಮಾಡಬಾರದೆಂದೇನೂ ಇಲ್ಲ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.