KSRTC ಹಕ್ಕು ಗೆದ್ದ ಕರ್ನಾಟಕ- ನೆರೆ ರಾಜ್ಯದ ತಕರಾರು ಅರ್ಜಿ ತಿರಸ್ಕೃತ- ಕೇರಳಕ್ಕೆ ಮುಖಭಂಗ

ಕೆಎಸ್‌ಆರ್‌ಟಿಸಿ ಟ್ರೇಡ್‌ ಮಾರ್ಕ್‌ಗಾಗಿ ಕೇರಳ ಮತ್ತು ಕರ್ನಾಟಕ ಸಾರಿಗೆ ನಿಗಮಗಳ ನಡುವೆ ಕಾನೂನು ಹೋರಾಟ

Team Udayavani, Dec 16, 2023, 12:05 AM IST

ksrtc club class

ಚೆನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು “ಕೆಎಸ್‌ಆರ್‌ಟಿಸಿ’ ಹೆಸರನ್ನು ಬಳಸುತ್ತಿರುವುದನ್ನು ಪ್ರಶ್ನಿಸಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸಿದೆ. ಹೀಗಾಗಿ “ಕೆಎಸ್‌ಆರ್‌ಟಿಸಿ’ ಹಕ್ಕು ಈಗ ಕರ್ನಾಟಕದ ಬಳಿ ಉಳಿಯಲಿದ್ದು, ಕೇರಳಕ್ಕೆ ಭಾರೀ ಹಿನ್ನಡೆಯಾಗಿದೆ.

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಕೂಡ ತನ್ನ ಹೆಸರನ್ನು ಸಂಕ್ಷಿಪ್ತವಾಗಿ “ಕೆಎಸ್‌ಆರ್‌ಟಿಸಿ’ ಎಂದೇ ಬಳಸುತ್ತಿದೆ. ಹೀಗಾಗಿ ಇದೇ ಹೆಸರನ್ನು ಕರ್ನಾಟಕ ಬಳಸಬಾರದು ಎಂದು ಕೇರಳ ತಕಾರರು ತೆಗೆದಿತ್ತು. ಆದರೆ ಕೇರಳದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸುವ ಮೂಲಕ ಸುದೀರ್ಘ‌ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ.

ಪ್ರಕರಣದ ಹಿನ್ನೆಲೆ

“ಕೆಎಸ್‌ಆರ್‌ಟಿಸಿ’ ಹೆಸರಿಗೆ ಸಂಬಂಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿರುದ್ಧ ಚೆನ್ನೈಯಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ 2013ರಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ಆದರೆ 2021ರಲ್ಲಿ ಐಪಿಎಬಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಅನಂತರ ಈ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

“1937ರಿಂದಲೇ ತಿರುವಾಂಕೂರು ರಾಜ್ಯ ಸಾರಿಗೆ ಇತ್ತು. 1965ರಲ್ಲಿ ಕೇರಳ ರಾಜ್ಯ ಉದಯವಾದ ಮೇಲೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು. ಕೆಎಸ್‌ಆರ್‌ಟಿಸಿಗೆ ಲಾಂಛನ ಕೂಡ ಇದೆ. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೂಡ ಸಂಕ್ಷಿಪ್ತವಾಗಿ ಕೆಎಸ್‌ಆರ್‌ಟಿಸಿ ಎಂದೇ ಬಳಸುತ್ತಿದೆ’ ಎಂದು ಕೇರಳ ವಾದ ಮಂಡಿಸಿತ್ತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಲಾಂಛನದಲ್ಲಿ ಗಂಡಭೇರುಂಡ ಗುರುತು ಇದೆ. “ಕೆಎಸ್‌ಆರ್‌ಟಿಸಿ’ ಹಾಗೂ ಗಂಡಭೇರುಂಡ ಲಾಂಛನ ಬಳಕೆಗೆ ಟ್ರೇಡ್‌ ಮಾರ್ಕ್‌ ಮತ್ತು ಕಾಪಿರೈಟ್‌ ಕೂಡ ಪಡೆಯಲಾಗಿದೆ. ಕೇರಳದ ಲಾಂಛನದಲ್ಲಿ ಆನೆಗಳ ಗುರುತು ಇದ್ದು, ಪ್ರತ್ಯೇಕ ಟ್ರೇಡ್‌ ಮಾರ್ಕ್‌ ಆಗಿದೆ ಎಂದು ಕರ್ನಾಟಕ ವಾದ ಮಂಡಿಸಿತ್ತು. ಅಂತಿಮವಾಗಿ ಕರ್ನಾಟಕದ ವಾದವನ್ನು ಮದ್ರಾಸ್‌ ಹೈಕೋರ್ಟ್‌ ಎತ್ತಿಹಿಡಿದಿದೆ. ಹೀಗಾಗಿ ಇನ್ನು

ಮುಂದೆ ಕೆಎಸ್‌ಆರ್‌ಟಿಸಿ ಹೆಸರು ಬಳಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಯಾವುದೇ ಕಾನೂನು ಅಡಚಣೆ ಇರುವುದಿಲ್ಲ.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.