ಕುಕ್ಕೆ ಸುಬ್ರಹ್ಮಣ್ಯ ದೇಗುಲ: ನೀರಿನಲ್ಲಿ ಬಂಡಿ ಉತ್ಸವ
Team Udayavani, Dec 16, 2021, 5:15 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ವಾರ್ಷಿಕ ಜಾತ್ರಾ ಮಹೋತ್ಸವವು ಬುಧವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನ ಗೊಂಡಿತು.
ಮುಂಜಾನೆ ಪ್ರಧಾನ ಅರ್ಚಕ ವೆ| ಮೂ| ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಆ ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸುವುದರೊಂದಿಗೆ ಜಾತ್ರೆ ಅಂತ್ಯಗೊಂಡಿತು. ಭಕ್ತರು ಶ್ರೀ ದೇವರ ಕೊಪ್ಪರಿಗೆ ಅನ್ನದ ಭೋಜನ ಪ್ರಸಾದ ಸ್ವೀಕರಿಸಿದರು.
ಬಂಡಿ ರಥೋತ್ಸವ
ಉತ್ಸವದ ನಿಮಿತ್ತ ದೇಗುಲದ ಹೊರಾಂಗಣಕ್ಕೆ ಬೆಳಗ್ಗಿನಿಂದ ನೀರನ್ನು ಬಿಟ್ಟು ಹೊರಾಂಗಣದ ಸುತ್ತಲೂ ನೀರನ್ನು ತುಂಬಿಸಲಾಯಿತು. ರಾತ್ರಿ ಮಹಾಪೂಜೆಯ ಬಳಿಕ ದೀಪಾರಾಧನೆಯುಕ್ತ ಪಾಲಕಿ ಉತ್ಸವವು ನೀರಿನಲ್ಲಿ ನೆರವೇರಿತು. ಅನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು. ಈ ಉತ್ಸವವನ್ನು ಸಹಸ್ರಾರು ಭಕ್ತರು ವೀಕ್ಷಿಸಿದರು.
ಇದನ್ನೂ ಓದಿ:ಸರ್ಕಾರಿ ಜಮೀನು ಏಕವ್ಯಕ್ತಿ ಕೋರಿಕೆ ಅರ್ಜಿಗಳ ಶೀಘ್ರ ವಿಲೇವಾರಿ: ಆರ್ ಅಶೋಕ್
ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಚಿಣ್ಣರು ಬಹಳಷ್ಟು ಸಂಭ್ರಮ ಪಟ್ಟರು. ನೀರನ್ನು ಹಾರಿಸಿ ಪುಟಾಣಿಗಳು ಸಂತಸಪಟ್ಟರು. ಮಕ್ಕಳೊಂದಿಗೆ ಹಿರಿಯರು ಕೂಡ ನೀರಾಟವಾಡಿ ಸಂಭ್ರಮಿಸಿದರು.
ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಇಒ ಡಾ| ನಿಂಗಯ್ಯ, ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್‌ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್ ಮುಂತಾದವರು ಉಪಸ್ಥಿತರಿದ್ದರು.
ಇಂದಿನಿಂದ ಸರ್ಪಸಂಸ್ಕಾರ ಸೇವೆ
ಜಾತ್ರೆಯ ಅವಧಿಯಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಜಾತ್ರೆ ಸಂಪನ್ನ ಗೊಂಡ ಕಾರಣ ಡಿ. 16ರಿಂದ ಸರ್ಪಸಂಸ್ಕಾರ ಸೇವೆಯು ಪುನರಾರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.