Kukke Subrahmanya Temple ಕಾಡಾನೆ ಸಂಚಾರ ಹಿನ್ನಲೆ: ಸೂಚನೆ
Team Udayavani, Dec 2, 2024, 11:34 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ರವಿವಾರ ರಾತ್ರಿ ಕಾಡಾನೆ ಸಂಚರಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಾಗೂ ದೇವಳದ ವತಿಯಿಂದ ಭಕ್ತರು ಹಾಗೂ ಸಾರ್ವಜನಿಕರು ಜಾಗೃತಿ, ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಸೋಮವಾರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸುಬ್ರಹ್ಮಣ್ಯ ಹಾಗೂ ಕಿದು ಮೀಸಲು ಅರಣ್ಯ ಭಾಗಗಳಲ್ಲಿ ಗಸ್ತು ಸಂಚರಿಸಿ ಕಾಡಾನೆ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಆ ಪ್ರಕಾರ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ ಆನೆಯು ಸುಬ್ರಹ್ಮಣ್ಯದಿಂದ ಹೊರಟು ಕೆದಿಲ-ಕೋಟೆ ಮಾರ್ಗವಾಗಿ ಕಿದು ಮೀಸಲು ಅರಣ್ಯ ಭಾಗದಲ್ಲಿ ಕಡೆಯದಾಗಿ ಕಂಡು ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ಕತ್ತಲು ಪ್ರದೇಶದಲ್ಲಿ, ನದಿ ತೀರದಲ್ಲಿ ಹಾಗೂ ಕಾಡಂಚಿನಲ್ಲಿ ಅವಾವಶ್ಯಕವಾಗಿ ತೆರಳದಂತೆ ಸೂಚಿಸಲಾಗಿದೆ
ಕೋರಿದೆ.
ಅರಣ್ಯ ಇಲಾಖೆಯ 4 ಸಿಬ್ಬಂದಿಗಳು ಸಂಜೆ 6 ಗಂಟೆಯಿಂದ ಸುಬ್ರಹ್ಮಣ್ಯದಲ್ಲಿ ರಾತ್ರಿ ಗಸ್ತು ಕೆಲಸ ನಿರ್ವಹಿಸುತ್ತಾರೆ. ಕಾಡಾನೆ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಗಸ್ತು ಸಿಬಂದಿ ಅಥವಾ ಅರಣ್ಯ ಇಲಾಖೆಯನ್ನು ಕೂಡಲೇ ಸಂಪರ್ಕಿಸಬೇಕಾಗಿ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.