ಹಾವು ಕಡಿತಕ್ಕೆ ಆಯುರ್ವೇದ ಚಿಕಿತ್ಸೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಷ ಚಿಕಿತ್ಸಾಲಯ

Team Udayavani, Feb 11, 2022, 7:05 AM IST

ಹಾವು ಕಡಿತಕ್ಕೆ ಆಯುರ್ವೇದ ಚಿಕಿತ್ಸೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಷ ಚಿಕಿತ್ಸಾಲಯ

ಕಾರ್ಕಳ: ನಾಗರಾಧನೆಗೆ ಪ್ರಸಿದ್ಧವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಷದ ಹಾವುಗಳ ಕಡಿತಕ್ಕೆ ಒಳಗಾದವರಿಗೆ ಆಯುರ್ವೇದ ಚಿಕಿತ್ಸೆ ನೀಡುವ ಆಸ್ಪತ್ರೆ ತೆರೆಯಲು ಸರಕಾರ ಚಿಂತನೆ ನಡೆಸಿದೆ.

ಮುಜರಾಯಿ ಇಲಾಖೆ 300 ಕೋ.ರೂ. ವೆಚ್ಚದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಇಂಜಾಡಿ ಬಳಿ 50 ಎಕರೆ ಪ್ರದೇಶದಲ್ಲಿ 100 ಕೋ.ರೂ. ವೆಚ್ಚದಲ್ಲಿ ಪರಿಸರ ಸ್ನೇಹಿ ಕುಟೀರ (“ಹಟ್‌’)ಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲಿ ಮನಃ ಶಾಂತಿ ದೊರಕಿಸುವ ಯೋಗ, ಥೆರಪಿ, ಧ್ಯಾನ, ಆಯು ರ್ವೇದ ಚಿಕಿತ್ಸೆ ಇತ್ಯಾದಿ ಸೌಲಭ್ಯ ಗಳಿರಲಿವೆ. ವಿಷ ಚಿಕಿತ್ಸೆಯ ಆಸ್ಪತ್ರೆಯೂ ಅದರಲ್ಲೊಂದು. ಹಾವು ಕಡಿತಕ್ಕೊಳಗಾದವರನ್ನು ದಾಖ ಲಿಸಿಕೊಳ್ಳಲು 5ರಿಂದ 6 ಬೆಡ್‌ ವ್ಯವಸ್ಥೆ ಇರಲಿದೆ. ಆಯುರ್ವೇದ ವೈದ್ಯರು, ದಾದಿಯರು ಇರಲಿದ್ದು ಗಿಡಮೂಲಿಕೆ ಮೂಲಕ ಚಿಕಿತ್ಸೆ ನೀಡಲಾಗುತ್ತದೆ.

ಸರಾಸರಿ 20ರಿಂದ 50 ಸಾವಿರ ಸಾವು
ಹಾವಿನ ಕಡಿತಕ್ಕೆ ತ್ವರಿತ ಚಿಕಿತ್ಸೆ ಅಗತ್ಯ. ಸ್ವಲ್ಪ ಎಚ್ಚರ ತಪ್ಪಿದರೂ ಅಡ್ಡ ಪರಿಣಾಮಗಳಾಗುತ್ತವೆ. ಆಧುನಿಕ ವೈದ್ಯ ವಿಜ್ಞಾನ ಎಷ್ಟೇ ಮುಂದುವರಿ ದರೂ ವೈದ್ಯರು ಚಿಕಿತ್ಸೆ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಹೆಚ್ಚು ಸಾವು ಸಂಭವಿಸುತ್ತಿರುತ್ತದೆ. ಹಾವು ಕಡಿತದಿಂದ ದೇಶದಲ್ಲಿ ವರ್ಷವೊಂದಕ್ಕೆ 20 ಸಾವಿರದಿಂದ 50 ಸಾವಿರದಷ್ಟು ಸಾವು ಸಂಭ ವಿಸುತ್ತಿದೆ. ಗಿಡಮೂಲಿಕೆಗಳ ಔಷಧವೇ ಈಗಲೂ ಹೆಚ್ಚಿನ ಕಡೆ ಬಳಕೆಯಾಗುತ್ತಿದೆ.

ಕರಾವಳಿ ನಾಗರಾಧನೆಗೆ ಪ್ರಸಿದ್ಧಿ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಾದ ದ.ಕ., ಉಡುಪಿ ಜಿಲ್ಲೆಗಳಲ್ಲಿ ಅಸಂಖ್ಯಾಕ ನಾಗಬನ ಗಳು ಕೂಡ ಇದ್ದು, ಅವು ಹಾವುಗಳ ಆವಾಸ ಸ್ಥಾನಗಳಾಗಿವೆ. ನಾಗರಹಾವು, ಕಾಳಿಂಗ ಸರ್ಪ, ಕಡಂಬಳ, ಕನ್ನಡಿ, ಕೊಳಕು ಮಂಡಲ, ಬಳೆ ಒಡಕ ಮೊದಲಾದ ಹಾವುಗಳು ವಿಷಪೂರಿತವಾಗಿರುತ್ತವೆ. ಕೇರೆ, ನೀರೊಳ್ಳೆಯಂತಹ ವಿಷರಹಿತ ಹಾವುಗಳೂ ಇವೆ. ದೇಶದಲ್ಲಿ 270ಕ್ಕೂ ಅಧಿಕ ಪ್ರಬೇಧದ ಹಾವುಗಳಿವೆ.

ಕೇರಳದಲ್ಲಿದೆ ವಿಷ ಚಿಕಿತ್ಸಾಲಯ
ಕೇರಳದ ಕಣ್ಣೂರು ಜಿಲ್ಲೆಯ ಪರಶ್ಶಿನಕಡವು ಸಮೀಪ ಪಾಪ್ಪಿನಶೆÏàರಿಯಲ್ಲಿ ವಿಷದ ಹಾವು ಕಡಿತದ ಚಿಕಿತ್ಸಾ ಕ್ಲಿನಿಕ್‌ ಇದೆ. ಅದನ್ನು ಹೊರತುಪಡಿಸಿದರೆ ದಕ್ಷಿಣ ಭಾರತದಲ್ಲಿ ಇಂತಹ ಆಸ್ಪತ್ರೆ ಇಲ್ಲ. ಆರಂಭದಲ್ಲಿ ಆ್ಯಂಟಿಬ್ಯಾಟಿಕ್‌ ಚುಚ್ಚುಮದ್ದು ಕೊಟ್ಟು ಬಳಿಕ ಆಯುರ್ವೇದ ಪದ್ಧತಿಯ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಕ್ಲಿನಿಕ್‌ನ ಡಾ| ಹರಿಕೃಷ್ಣ ತಿಳಿಸಿದ್ದಾರೆ.

ಇಂಜಾಡಿ ಬಳಿ ವಿಷ ಚಿಕಿತ್ಸಾಲಯವನ್ನು ತೆರೆಯಲು ಉದ್ದೇಶಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಡಿಪಿಆರ್‌ ಸಿದ್ಧವಾಗಲಿದೆ. ಈಗಿನ ನೈಸರ್ಗಿಕ ಪರಿಸರವನ್ನು ಹಾಗೆಯೇ ಉಳಿಸಿಕೊಂಡು ಪರಿಸರ ಸ್ನೇಹಿಯಾಗಿ, ನಿರ್ಮಿಸಲಾಗುತ್ತಿದೆ.
ಮೋಹನ್‌ ರಾಂ ಸುಳ್ಳಿ , ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ, ಕುಕ್ಕೆ ಸುಬ್ರಹ್ಮಣ್ಯ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.