ಕುಸಿದ ಕುಕ್ಕುಜ – ಅಳಂಬ ಸಂಪರ್ಕ ಸೇತುವೆ
Team Udayavani, May 28, 2020, 5:29 AM IST
ಬೆಳ್ತಂಗಡಿ: ನಾರಾವಿ ಗ್ರಾ. ಪಂಚಾಯತ್ ವ್ಯಾಪ್ತಿಯ ಕುಕ್ಕುಜೆ ಕ್ರಾಸ್‌ನಿಂದ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಲಂಬಕ್ಕೆ ತೆರಳುವ ಕುಕ್ಕುಜೆ ಸಂಪರ್ಕ ಸೇತುವೆ ಬುಧವಾರ ಸಂಜೆ ಕುಸಿದು ಬಿದ್ದಿದೆ.
ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದ ಈ ಸೇತುವೆ ವಿಚಾರವಾಗಿ ಹಲವು ಬಾರಿ ಗ್ರಾಮಸ್ಥರು ನೂತನ ಸೇತುವೆ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಕಳೆದ ಮಳೆಗಾಲದಲ್ಲಿ ಕುಕ್ಕುಜೆ ಸೇತುವೆ ಶಿಥಿಲಾವಸ್ಥೆ ತಲುಪಿರುವ ಕುರಿತು ಕಳೆದ ವರ್ಷದ ಜೂ. 3ರಂದು ಉದಯವಾಣಿ ಸಚಿತ್ರ ವರದಿ ಪ್ರಕಟಿಸಿತ್ತು.
ಈ ಸೇತುವೆ 15 ಮೀಟರ್ ಉದ್ದದ 40 ವರ್ಷಗಳಷ್ಟು ಹಳೆಯದ್ದಾಗಿದ್ದು ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕನಿಷ್ಠ 80 ವರ್ಷ ಬಾಳಿಕೆ ಬರಬೇಕಿದ್ದ ಈ ಸೇತುವೆ ಇದೀಗ ಕುಸಿತ ಗೊಂಡಿರುವುದರಿಂದ 300 ಕುಟುಂಬಗಳಿಗೆ ಸಂಪರ್ಕವಿಲ್ಲದಂತಾಗಿದೆ. ಮಳೆಗಾಲ ಸಮೀಪಿಸಿದ್ದರಿಂದ ಅಗತ್ಯ ವಸ್ತುಗಳ ಸಾಗಾಟಕ್ಕೆ ತೊಂದರೆಯಾಗಿದೆ. ಕಳೆದ ವರ್ಷದಿಂದಲೇ ಈ ರಸ್ತೆಯಲ್ಲಿ ಘನವಾಹನ ಸಂಚಾರಕ್ಕೆ ನಿಷೇಧಿಸಲಾಗಿತ್ತು. ಸದ್ಯ ಗ್ರಾ.ಪಂ ನದಿಯಲ್ಲಿ ತಾತ್ಕಾಲಿಕ ರಸ್ತೆಯನ್ನು ನಿರ್ಮಿಸಿ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.