H.D Kumaraswamy: ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ
Team Udayavani, Aug 31, 2023, 8:40 PM IST
ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಮೂರು ದಿನಗಳ ಕಾಲ ವಾರ್ಡನಲ್ಲೇ ಚಿಕಿತ್ಸೆ ನೀಡಲಿದ್ದು, ಕುಟುಂಬ ಸದಸ್ಯರನ್ನು ಹೊರತುಪಡಿಸಿ ಯಾರನ್ನೂ ಭೇಟಿ ಮಾಡದೆ ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದರು ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ.
ತೀವ್ರ ಜ್ವರ ಹಾಗೂ ಸುಸ್ತಿನಿಂದ ಬಳಲುತ್ತಿದ್ದ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ.ಸತೀಶ್ ಚಂದ್ರ ಮತ್ತು ಅವರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಆರೋಗ್ಯ ವಿಚಾರಿಸಿದ ಪುತ್ರ ನಿಖೀಲ್:
ತಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ವಿದೇಶ ಪ್ರವಾಸದಲ್ಲಿದ್ದ ನಿಖೀಲ್ ಕುಮಾರಸ್ವಾಮಿ ಅವರು ಗುರುವಾರ ಬೆಂಗಳೂರಿಗೆ ಆಗಮಿಸಿ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಸಹ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ತಂದೆ ಆರೋಗ್ಯವಾಗಿದ್ದಾರೆಂದು ನಿಖೀಲ್ ಟ್ವಿಟ್:
ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.
ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರೂ ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ. ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು ಎಂದು ಟ್ವೀಟ್ ಮೂಲಕ ನಿಖೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.