ಕುಂಪಲ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
Team Udayavani, Feb 19, 2023, 10:11 AM IST
ಉಳ್ಳಾಲ: ಕೀಟನಾಶಕ ಸೇವಿಸಿ ಫೆ.14 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಫೆ. 19 ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ (17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು.
ಘಟನೆಯ ವಿವರ: ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ರಜೆಯಲ್ಲಿದ್ದ ಮಗಳು ಮನೆಯಲ್ಲಿರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯ ಮನೆಗೆ ಮರಳಿದ್ದು, ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು, ಆಕೆ ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿ ಎರಡೇಟು ಹೊಡೆದಿದ್ದರಂತೆ.
ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು.ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕ ಸೇವಿಸಿ ತೀರಾ ಅಸ್ವಸ್ಥಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.