Kushtagi: ಚಿಕೂನ್ ಗುನ್ಯಾಕ್ಕೆ ನೆರೆಬೆಂಚಿ ಗ್ರಾಮಸ್ಥರು ತತ್ತರ
ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ಸಮನ್ವಯ ಕೊರತೆಗೆ ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚಳ
Team Udayavani, Feb 8, 2024, 6:06 PM IST
ಕುಷ್ಟಗಿ: ಇಲ್ಲಿಗೆ ಸಮೀಪದ ನೆರೆಬೆಂಚಿ ಗ್ರಾಮದಲ್ಲಿ 130ಕ್ಕೂ ಅಧಿಕ ಜನರಲ್ಲಿ ಚಿಕೂನ್ ಗುನ್ಯಾ ರೋಗ ಲಕ್ಷಣ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿ ಕ್ರಮವಹಿಸಿದ್ದು ಸದ್ಯ ಪ್ರಕರಣ ನಿಯಂತ್ರಣಕ್ಕೆ ಬಂದಿದೆ.
ವೈರಲ್ ಜ್ವರ, ತಲೆ ಮತ್ತು ಕೀಲು ನೋವಿನ ಲಕ್ಷಣ ಕಳೆದೆರೆಡು ವಾರಗಳಿಂದ ಇತ್ತಾದರೂ, ಜನ ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಸ್ಥಳೀಯವಾಗಿ ಹಾಗೂ ಪಟ್ಟಣದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಾಗ್ಯೂ ಬಾಧಿತರ ಪ್ರಮಾಣ ಹೆಚ್ಚಿದ್ದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸಾಮಾನ್ಯ ಜ್ವರವೋ? ವಿಷಮಶೀತ ಜ್ವರವೋ? , ಚಿಕೂನ್ ಗುನ್ಯಾ, ಡೆಂಘೀಯೋ ಎಂಬುದು ತಿಳಿಯದೇ ಗೊಂದಲಕ್ಕೀಡಾಗಿದ್ದರು. ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆರೋಗ್ಯ ಇಲಾಖೆ ದೌಡಾಯಿಸಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ತಾತ್ಕಾಲಿಕ ಕ್ಲಿನಿಕ್ ಆರಂಭಿಸಲಾಗಿದೆ. ಗ್ರಾಮದಲ್ಲಿ ಆತಂಕದ ವಾತವರಣವಿದ್ದು, ವಿಪರೀತ ಜ್ವರ, ಮೈಕೈನೋವಿನ ಇರುವ ರೋಗಿಗಳನ್ನು ಆ್ಯಂಬ್ಯುಲೆನ್ಸ್‌ನಲ್ಲಿ ಕುಷ್ಟಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಗಡ್ಡಕ್ಕೆ ಬೆಂಕಿ ಹಚ್ಚಿದಾಗ ಬಾವಿ ತೋಡಿದರು ಎನ್ನುವಂತೆ ನೆರೆಬೆಂಚಿ ಗ್ರಾಮದ ಮುಖ್ಯ ಚರಂಡಿಯಲ್ಲಿ ಕೊಳಚೆ ನೀರು ಮಡುಗಟ್ಟಿ ನಿಂತಿದೆ. ಬೀರಲಿಂಗೇಶ್ವರ ದೇವಸ್ಥಾನ ಹಿಂಭಾಗದ ಪ್ರದೇಶದಲ್ಲಿ ಕೊಳಚೆ ನೀರಿನಲ್ಲಿ ಆಪು ಸಸ್ಯ ಬೆಳೆದಿದೆ. ಈ ಚರಂಡಿ ಹಳ್ಳಕ್ಕೆ ಸಂಪರ್ಕಿಸಲಾಗಿದ್ದರೂ ತ್ಯಾಜ್ಯ ಹಾಕುವುದು ನಿಂತಿಲ್ಲ. ಗ್ರಾಮ ಪಂಚಾಯತಿ ಸಕಾಲದಲ್ಲಿ ತ್ಯಾಜ್ಯದ ಹೂಳೆತ್ತದೇ ಇರುವುದು ಅಲ್ಲಲ್ಲಿ ಕೊಳಚೆ ನೀರು ಮಡುಗಟ್ಟಿ ನಿಂತಿದ್ದು, ಸೊಳ್ಳೆಗಳ ಸಂತತಿ ಹೆಚ್ಚಲು ಕಾರಣವಾಗಿದೆ. ಅವೈಜ್ಞಾನಿಕ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹಳ್ಳ ಸೇರುವುದು ವ್ಯವಸ್ಥಿತವಾಗಿಲ್ಲದಿರುವುದರಿಂದ ಅಲ್ಲಲ್ಲಿ ದುರ್ನಾತ ಬೀರುತ್ತಿರುವುದು ಪರಿಸರ ಮಾಲಿನ್ಯತೆಗೆ ಕಾರಣವಾಗಿದೆ.
ನೂರಕ್ಕೂ ಹೆಚ್ಚು ಜನರಲ್ಲಿ ಈ ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದ್ದಂತೆ ಸ್ವಚ್ಚತೆಗೆ ಇನ್ನಿಲ್ಲದ ಕಾಳಜಿವಹಿಸಿದ್ದು, ಚರಂಡಿಯ ಅಕ್ಕಪಕ್ಕ ಬ್ಲೀಚಿಂಗ್ ಪೌಡರ್ ಹಾಕಿದ್ದು, ಚರಂಡಿಯಲ್ಲಿ ಮಡುಗಟ್ಟಿ ನಿಂತಿರುವ ಕೊಳಚೆ ನೀರನ್ನು ಸಕ್ಕಿಂಗ್ ಮಿಷನ್ ಮೂಲಕ ಹೊರ ಹಾಕಲು ಮುಂದಾಗಿದ್ದಾರೆ.
ಡಿಎಚ್‌ಓ ಡಾ. ಲಿಂಗರಾಜು, ತಹಶೀಲ್ದಾರ ರವಿ ಅಂಗಡಿ, ತಾ.ಪಂ. ಸಹಾಯಕ ನಿರ್ದೇಶಕ ನಿಂಗಪ್ಪ ಹಿರೇಹಾಳ ಪಿಎಸೈ ಮುದ್ದುರಂಗಸ್ವಾಮಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಕ್ರಮಕ್ಕೆ ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.