ಕುಷ್ಟಗಿ: ವೀರ ಯೋಧ ಸಂದೀಪ್ ಉನ್ನಿಕೃಷ್ಣನ್ ಸ್ಮರಣೆ
Team Udayavani, Nov 29, 2021, 12:46 PM IST
ಕುಷ್ಟಗಿ: ಹೈದರಾಬಾದ್-ಕರ್ನಾಟಕ ಯುವಶಕ್ತಿ ಸಂಘಟನೆಯ ನೇತೃತ್ವದಲ್ಲಿ,ನಗರದ ಗಜೇಂದ್ರಗಡ ರಸ್ತೆಗೆ ಹೊಂದಿಕೊಂಡಿರುವ ಹುತಾತ್ಮ ವೀರಯೋಧನ ಸಂದೀಪ್ ಉನ್ನಿಕೃಷ್ಣನ್ ನಗರದ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಮೇಣದಬತ್ತಿ ಬೆಳಗಿಸಲಾಯಿತು.
26-11-2008 ರಲ್ಲಿ ಮುಂಬೈನ ತಾಜ್ ಹೋಟೆಲ್ ಸೇರಿದಂತೆ ವಿವಿಧ ಜನನೀಬಿಡ ಸ್ಥಳಗಳಲ್ಲಿ ನಡೆದ, ಲಷ್ಕರ್-ಇ-ತೋಯ್ಬಾ ಉಗ್ರರ ದಾಳಿಯನ್ನು ನಿಯಂತ್ರಿಸಿ ಹಿಮ್ಮೆಟ್ಟಿಸಲು, ಎನ್ಎಸ್ ಜಿ ಕಮಾಂಡೋ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರವರ ಪಾತ್ರ ಪ್ರಮುಖ ಮತ್ತು ಸ್ಮರಣೀಯ. ನ. 28 ಧೈರ್ಯ- ಸಾಹಸ, ತ್ಯಾಗದ ಬಲಿದಾನದ ಪ್ರತೀಕವಾಗಿ ಹುತಾತ್ಮರಾದ ವೀರ ಯೋಧರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು, ಕುಷ್ಟಗಿಯ ಮೇಜರ್ ಸಂದೀಪ್ ಉನ್ನಿಕೃಷ್ಣನ್ ನಗರದ ನಾಮಫಲಕ ಸ್ಥಳದಲ್ಲಿ ಮೇಣದಬತ್ತಿ ಬೆಳಗಿಸುವ ಮೂಲಕ ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಜಿ.ಕೆ ಹಿರೇಮಠ, ತಾಲೂಕು ಮಾಜಿ ಸೈನಿಕರ ಸಂಘ ಅಧ್ಯಕ್ಷ ಹಂಪನಗೌಡ ಬಳೂಟಗಿ, ಸದಸ್ಯರಾದ ಭೀಮನಗೌಡ ಜಾಲಿಹಾಳ, ಶರಣಯ್ಯ ಹಿರೇಮಠ, ಕ.ರಾ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರ ನಜೀರಸಾಬ್ ಮೂಲಿಮನಿ, ಹೈ-ಕ ಯುವಶಕ್ತಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಗಾಣಿಗೇರ, ಮಂಜುನಾಥ ತಳುವಗೇರಾ, ರಾಘವೇಂದ್ರ ಕುಲಕರ್ಣಿ, ತಾಲೂಕಾಧ್ಯಕ್ಷ ಅಕ್ಬರ್ ನದಾಫ್, ಕುಷ್ಟಗಿ ನಗರ ಘಟಕದ ಅಧ್ಯಕ್ಷ ಬಸವರಾಜ ತಿಮ್ಮಾಪೂರ, ಹೋಬಳಿ ಘಟಕದ ಅಧ್ಯಕ್ಷ ಪರಶುರಾಮ ಈಳಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.