![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 24, 2021, 2:51 PM IST
ಡಾ| ಗಿರೀಶ್, ಕುಮಾರಸ್ವಾಮಿ
ಶಿವಮೊಗ್ಗ: ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ| ಬಿ.ಜೆ. ಗಿರೀಶ್ ಮತ್ತು ಡಾ| ಬಿ.ಇ. ಕುಮಾರಸ್ವಾಮಿ ಅವರು ಸ್ಥಾನ ಪಡೆದಿದ್ದಾರೆ.
ಎಲ್ಸೇವಿಯರ್ ಸಂಸ್ಥೆ ಸಹಯೋಗದೊಂದಿಗೆ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರ ನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ ಶೇ.2 ವಿಜ್ಞಾನಿಗಳ ಡೇಟಾಬೇಸ್ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ. ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಎಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ. 2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 54804ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ| ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಷಯಗಳ ಕುರಿತ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇನ್ನು ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕ ಡಾ| ಬಿ.ಇ. ಕುಮಾರಸ್ವಾಮಿ 165713ನೇ ಸ್ಥಾನದಲ್ಲಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವಿವಿಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯ ಮಾಡುತ್ತಿರುವ ಈ ಇಬ್ಬರು ಅಧ್ಯಾಪಕರ ಸಾಧನೆಯು ಕುವೆಂಪು ವಿವಿಗೆ ಹೆಮ್ಮೆ ತಂದಿದೆ ಎಂದು ವಿವಿಯ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅವರು ಅಭಿನಂದಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.