ಜನಪ್ರತಿನಿಧಿಗಳ ನೆರವು: ಸ್ವದೇಶಕ್ಕೆ ಕುವೈತ್‌ ಕನ್ನಡಿಗರು

Team Udayavani, Aug 20, 2020, 2:43 PM IST

ಜನಪ್ರತಿನಿಧಿಗಳ ನೆರವು: ಸ್ವದೇಶಕ್ಕೆ ಕುವೈತ್‌ ಕನ್ನಡಿಗರು

ಬೀದರ್: ಹೆಮ್ಮಾರಿ ಕೋವಿಡ್ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡು ಗಲ್ಫ್ ರಾಷ್ಟ್ರ ಕುವೈತ್‌ನಲ್ಲಿ ಸಿಲುಕಿದ್ದ ಬೀದರ ಮತ್ತು ಕಲಬುರಗಿಯ ಕನ್ನಡಿಗರು ಜಿಲ್ಲೆಯ ಜನಪ್ರತಿನಿಧಿಗಳ ಪ್ರಯತ್ನದಿಂದ ನಿರಾಳರಾಗಿದ್ದು, ಬುಧವಾರ ಮೊದಲ
ಹಂತದಲ್ಲಿ 98 ಜನ ಸ್ವದೇಶಕ್ಕೆ ಮರಳಿದ್ದಾರೆ.

ಉದ್ಯೋಗಕ್ಕೆಂದು ಕರೆದೊಯ್ದ ಕಂಪೆನಿ ಅರ್ಧದಲ್ಲೇ ಕೈ ಕೊಟ್ಟಿದ್ದರಿಂದ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಕಾರಣ ಬೀದರ, ಕಲಬುರಗಿ ಜಿಲ್ಲೆಯ 200 ಯುವಕರು ಕುವೈತ್‌ನಲ್ಲಿ ಸಿಲುಕಿದ್ದರು. ಉದ್ಯೋಗಕ್ಕೆಂದು ಕರೆದೊಯ್ದಿದ್ದ ಹೈದರಾಬಾದನ ಮೆಗಾ ಇನ್‌ಫ್ರಾಸ್ಟ್ರಕ್ಚರ್‌ ಕಂಪನಿ ಕೋವಿಡ್ ಆರ್ಥಿಕ ಹೊಡೆತ ಕಾರಣಕ್ಕೆ ನೌಕರರನ್ನು ಕೈಬಿಟ್ಟಿತ್ತು. ಇದರಿಂದ ಹಲವು ತಿಂಗಳಿಂದ ವೇತನವಿಲ್ಲದೆ, ಕೆಲಸವೂ ಇಲ್ಲದೆ ಪರದಾಡುತ್ತಿದ್ದರು. ಈ ಸಮಸ್ಯೆ ಬಗ್ಗೆ ಕೆಲ ದಿನಗಳ ಹಿಂದೆ ಅಲ್ಲಿನ ಕನ್ನಡಿಗರು ವಿಡಿಯೋ ಸಂದೇಶ ಕಳೆಸಿದ್ದರು. ಈ ಕುರಿತು ಉದಯವಾಣಿಯಲ್ಲಿ ವಿಸ್ತೃತ ವರದಿ ಪ್ರಕಟಗೊಂಡಿತ್ತು.

ವಿದೇಶಗಳಲ್ಲಿರುವ ಕನ್ನಡಿಗರನ್ನು ಭಾರತಕ್ಕೆ ಕರೆತಂದಂತೆ ನಮ್ಮನ್ನೂ ಸಹ ಕರೆತರಬೇಕು. ಇದಕ್ಕಾಗಿ ಸಿಎಂ ಯಡಿಯೂರಪ್ಪ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಾಜಶೇಖರ ಪಾಟೀಲ ಮತ್ತು ಸಂಸದ ಭಗವಂತ ಖೂಬಾ ಪ್ರಯತ್ನಿಸಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದರು. ಕೂಡಲೇ ಎಚ್ಚೆತ್ತ ಜಿಲ್ಲೆಯ ಪ್ರತಿನಿಧಿಗಳು ಕುವೈತ್‌ ಕನ್ನಡಿಗರನ್ನು ವಾಪಸ್‌ ಕರೆಯಿಸಿಕೊಳ್ಳಲು ಶ್ರಮಿಸಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಾಜಶೇಖರ ಪಾಟೀಲ ಅವರು ಕುವೈತ್‌ನಿಂದ ಹೈದ್ರಾಬಾದ್‌ಗೆ 98 ಜನರ ವಿಮಾನ ಟಿಕೆಟ್‌ ಮಾಡಿಸಿದ್ದರೆ, ಮಾಜಿ ಸಚಿವ ಬೇಗಾನೆ ರಾಮಯ್ಯ ಪುತ್ರಿ, ಭಾರತೀಯ ವಿದೇಶಾಂಗ ಸಚಿವಾಲಯದ ಮಾಜಿ ಸಲಹೆಗಾರರಾದ ಆರತಿ ಕೃಷ್ಣ ರಾಯಭಾರಿ ಕಚೇರಿಯಲ್ಲಿನ ತೊಂದರೆಗಳನ್ನು ಪರಿಹರಿಸುವಲ್ಲಿ ಶ್ರಮಿಸಿದ್ದಾರೆ. ಬುಧವಾರ ಮಧ್ಯಾಹ್ನ ಹೈದ್ರಾಬಾದ್‌ಗೆ ಆಗಮಿಸಿರುವ ಕನ್ನಡಿಗರು ಈಗ ಕೋವಿಡ್‌ ನಿಯಮದಂತೆ ಅಲ್ಲಿಯೇ ಕ್ವಾರಂಟೈನ್‌ನಲ್ಲಿ ಉಳಿದಿದ್ದಾರೆ. ಇನ್ನುಳಿದ 100 ಜನರು ಸಹ ಕೆಲ ದಿನಗಳಲ್ಲೇ ಪರಿವಾನಗಿ, ಟಿಕೆಟ್‌ ವ್ಯವಸ್ಥೆ ಆಗುತ್ತಿದ್ದಂತೆ ತಾಯ್ನಾಡಿಗೆ ಮರಳಲಿದ್ದಾರೆ.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.