ಮಂಗನ ಕಾಯಿಲೆ ಲಸಿಕೆಗಾಗಿ ಪ್ರಯೋಗಾಲಯ ಸ್ಥಾಪನೆ: ಶ್ರೀರಾಮುಲು
ಜ.19: ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕೆ
Team Udayavani, Jan 17, 2020, 9:08 PM IST
ಬೆಂಗಳೂರು: ಜ. 19ರಂದು ರಾಜ್ಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಎಲ್ಲ ಪೋಷಕರು ಐದು ವರ್ಷದೊಳಗಿನ ತಮ್ಮ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ತಪ್ಪದೇ ಹಾಕಿಸಬೇಕು ಎಂದು ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದರು.
ವಿಕಾಸಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಒಂದೇ ಸುತ್ತಿನಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 64,65,651 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. ಇದಕ್ಕಾಗಿ 33,021 ಬೂತ್‌ಗಳು, 46,620 ತಂಡಗಳು, 1,09,554 ಲಸಿಕಾ ಕಾರ್ಯಕರ್ತರು, 7,105 ಮೇಲ್ವಿಚಾರಕರು, 977 ಸಂಚಾರಿ ತಂಡಗಳು ಹಾಗೂ 2,111 ಟ್ರಾನ್ಸಿಟ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ಹಳ್ಳಿ, ನಗರ- ಪಟ್ಟಣ ಮಾತ್ರವಲ್ಲದೇ ಗುಡ್ಡಗಾಡು ಪ್ರದೇಶ, ಇಟ್ಟಿಗೆ ಬಟ್ಟಿ, ಕಾಮಗಾರಿ ಪ್ರದೇಶ, ವಲಸಿಗರು ನೆಲೆಸಿರುವ ಪ್ರದೇಶ, ತೋಟದ ಮನೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ನಿಲ್ದಾಣ, ವಿಮಾನನಿಲ್ದಾಣ ಸೇರಿದಂತೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ. ಈ ಕಾರ್ಯಕ್ಕಾಗಿ ಆಶಾ- ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಇತರೆ ಸ್ವಯಂಸೇವಕರನ್ನು ಸಜ್ಜುಗೊಳಿಸಲಾಗಿದೆ. ಪಲ್ಸ್ ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಪಿಂಕ್ ಬಸ್ ಯೋಜನೆ
ದಶಕದ ಹಿಂದೆ “108 ಆರೋಗ್ಯ ರಕ್ಷಾ ಕವಚ’ ಯೋಜನೆ ಜಾರಿಗೊಳಿಸಲಾಗಿತ್ತು. ಇದೀಗ ಪಿಂಕ್ ಬಸ್ ಯೋಜನೆ ರೂಪಿಸಲಾಗುತ್ತಿದ್ದು, ಬಜೆಟ್‌ನಲ್ಲಿ ಘೋಷಣೆಯಾಗಲಿದೆ ಎಂದ ಸಚಿವ ಬಿ.ಶ್ರೀರಾಮುಲು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು.
ರಾಜ್ಯದ ಬಡವರು ಆಸ್ಪತ್ರೆಗಳಿಗೆ ಬಂದಾಗ ಅವರಿಗೆ ಎಲ್ಲ ರೀತಿಯ ಸವಲತ್ತು ಸಿಗಬೇಕು. ವೈದ್ಯರು, ತಜ್ಞರು, ಅರೆವೈದ್ಯ ಸಿಬಂದಿ ಸೇವೆ ಜತೆಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತೆ ವ್ಯವಸ್ಥೆ ಕಲ್ಪಿಸಲು ಒತ್ತು ನೀಡಲಾಗುವುದು. ಈ ಬಗ್ಗೆ ಬಜೆಟ್ ಪೂರ್ವಭಾವಿ ಸಭೆಗಳಲ್ಲೂ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಯೋಜನೆಯಡಿ ಸೌಲಭ್ಯ ಪಡೆಯುವುದಕ್ಕೆ ಸಂಬಂಧಪಟ್ಟಂತೆ ಸಾಫ್ಟ್ವೇರ್‌ನಲ್ಲಿದ್ದ ಸಮಸ್ಯೆಗಳನ್ನು ನಿವಾರಿಸಲಾಗಿದೆ. ಸದ್ಯ 400 ಖಾಸಗಿ ಆಸ್ಪತ್ರೆ, 3000 ಸರಕಾರಿ ಆಸ್ಪತ್ರೆಗಳನ್ನು ಯೋಜನೆಯಡಿ ಚಿಕಿತ್ಸೆಗೆ ಗುರುತಿಸಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ಅಖ್ತರ್, ಆಯುಷ್ಮಾನ್ ಭಾರತ್’ ಯೋಜನೆಯಡಿ ಈವರೆಗೆ ಐದು ಲಕ್ಷ ಶಸ್ತ್ರಚಿಕಿತ್ಸೆ ಸೇರಿದಂತೆ ಇತರೆ ಚಿಕಿತ್ಸೆ ನೀಡಲಾಗಿದ್ದು, 1,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದ ಸೇವೆಗಳ ಬಗ್ಗೆ ಅಧಿಕಾರಿಗಳು ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಬೇಕಿತ್ತು. ಈ ಪ್ರಕ್ರಿಯೆಯಲ್ಲಿ ಸ್ವಲ್ಪ ಸಮಸ್ಯೆ ಇತ್ತು. ಇದೀಗ ಸುಧಾರಿತ ವ್ಯವಸ್ಥೆ ತರಲಾಗಿದೆ. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ಸಂಬಂಧಪಟ್ಟ ನೋಂದಾಯಿತ ಆಸ್ಪತ್ರೆಗಳ ವಿವರ ಸಿಗಲಿದ್ದು, ಯಾಂತ್ರಿಕವಾಗಿ ಅದರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಹಾವು ಸೇರಿದಂತೆ ಇತರೆ ವಿಷಜಂತುಗಳ ಕಡಿತಕ್ಕೆ ಕೆಲವೆಡೆ ಔಷಧಗಳು ಲಭ್ಯವಿಲ್ಲದಿರುವುದು ಗಮನಕ್ಕೆ ಬಂದಿದ್ದು, ಇನ್ನು ಮುಂದೆ ಇಲಾಖೆಯಿಂದಲೇ ಔಷಧಗಳನ್ನು ಖರೀದಿಸಿ ಎಲ್ಲ ಆಸ್ಪತ್ರೆಗಳಿಗೆ ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಡಿಪಿಆರ್‌ಗೆ ಸಿದ್ಧತೆ
ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗದಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಿಂದೆ ಸಾಗರದಲ್ಲಿ ಪ್ರಯೋಗಾಲಯ ಸ್ಥಾಪನೆ ಮಾತುಗಳಿದ್ದರೂ ತಾಂತ್ರಿಕ ಕಾರಣಕ್ಕೆ ಶಿವಮೊಗ್ಗದಲ್ಲಿ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.