Manipal ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
Team Udayavani, May 24, 2024, 11:09 PM IST
ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ಸುರಕ್ಷತ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕುಕ್ಕೆಹಳ್ಳಿಯ ರಘುರಾಮ ಕುಲಾಲ್ (50) ಸಾವನ್ನಪ್ಪಿರುವವರು.
ಮಣಿಪಾಲ ಈಶ್ವರನಗರದಲ್ಲಿರುವ ಕಟ್ಟಡವೊಂದರ 4ನೇ ಮಹಡಿಯ ಕೆಲಸ ನಡೆಯುತ್ತಿದ್ದು, ಒಂದು ತಿಂಗಳಿನಿಂದ 10 ಮಂದಿ ಕೆಲಸ ಮಾಡುತ್ತಿದ್ದರು.
ಮೃತ ರಘುರಾಮ ಹಾಗೂ ಅವರ ಸಹೋದರ ಪದ್ಮನಾಭ ಅವರೂ ಈ ತಂಡದಲ್ಲಿದ್ದರು. ಮೇ 23ರಂದು ರಘುರಾಮ ಕುಲಾಲ್ ಅವರು 4ನೇ ಮಹಡಿಯ ಹೊರಗಡೆ ಗೋಡೆಯ ಗಾರೆ ಕೆಲಸ ಮಾಡುತ್ತಿದ್ದರು.
ಈ ವೇಳೆ ಸರಿಯಾದ ಸುರಕ್ಷತ ಕ್ರಮಗಳನ್ನು ಕಟ್ಟಡದ ಮಾಲಕರು ಹಾಗೂ ಗುತ್ತಿಗೆದಾರರು ವಹಿಸದ ಕಾರಣ ರಘುರಾಮ ಅವರು ಕಟ್ಟಡದ ಹೊರಭಾಗದಲ್ಲಿದ್ದ ಪ್ಯಾರಾಪೀಟ್ ಮೇಲೆ ಕಾಲು ಇಡುವಾಗ ಕಾಲು ಜಾರಿ ಕೆಳಕ್ಕೆ 50 ಅಡಿ ಆಳಕ್ಕೆ ಬಿದ್ದಿದ್ದರು.
ಕೂಡಲೇ ಅವರ ಸಹೋದರ ಪದ್ಮನಾಭ ಹಾಗೂ ಕೆಲಸದವರು ಕೆಳಕ್ಕೆ ಹೋಗಿ ನೋಡಿದಾಗ ರಘುರಾಮ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ವೈದ್ಯರು ಪರೀಕ್ಷಿಸಿ ಅವರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.