ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ವಿರೋಧ

Team Udayavani, May 27, 2020, 9:41 AM IST

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ವಿರೋಧ

ಬಳ್ಳಾರಿ: ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ನಗರದ ಡಿಸಿ ಕಚೇರಿ ಆವರಣದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಆದೇಶ ಪ್ರತಿಯನ್ನು ದಹಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರವು ಈಚೆಗೆ ಕಾರ್ಮಿಕರ ಕಾಯ್ದೆಯನ್ನು ತಿದ್ದುಪಡಿ ಮಾಡಿ ಕಾರ್ಮಿಕರ ಕೆಲಸ ಅವಧಿಯನ್ನು 8ರಿಂದ 10 ಗಂಟೆವರೆಗೆ ಹೆಚ್ಚಿಸಿದೆ. ಇದು ಕಾರ್ಮಿಕ ವಿರೋಧಿಯಾಗಿದೆ. ಈಗಾಗಲೇ ಕೋವಿಡ್‌-19ರ ಲಾಕ್‌ಡೌನ್‌ ಪರಿಣಾಮವಾಗಿ ದೇಶವ್ಯಾಪಿ ಕೋಟ್ಯಾಂತರ ಕಾರ್ಮಿಕರ ಬದುಕು ಅಸ್ತವ್ಯಸ್ತವಾಗಿದೆ. ಆರ್ಥಿಕ ಕುಸಿತದ ಫಲವಾಗಿ ಕಾರ್ಮಿಕ ವರ್ಗದ ಜೀವನ ಅತ್ಯಂತ ಅಭದ್ರತೆಯಲ್ಲಿ ಸಿಲುಕಿ ಅತಂತ್ರವಾಗಿರುವಾಗ, ಕಾರ್ಪೊರೇಟ್‌ ಉದ್ಯಮಿಗಳಿಗೆ, ತಮ್ಮಿಚ್ಛೆ ಬಂದಂತೆ
ಶೋಷಣೆಗೈಯಲು ಅನುಕೂಲ ಮಾಡಿಕೊಡುವ ಹುನ್ನಾರದಿಂದ ಸರ್ಕಾರ ಈ ಆದೇಶವನ್ನು ಹೊರಡಿಸಿದೆ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲ ಹೆಸರಾಂತ ಆರ್ಥಿಕ ತಜ್ಞರು ಎಲ್ಲ ಕಾರ್ಮಿಕ ವರ್ಗಕ್ಕೆ ಕನಿಷ್ಟ ನಾಲ್ಕು ತಿಂಗಳುಗಳ ಕಾಲ ತಿಂಗಳಿಗೆ 10 ಸಾವಿರ ರೂ. ಹಣವನ್ನು ಕಾರ್ಮಿಕರ ಖಾತೆಗಳಿಗೆ ಹಾಕಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಆರ್ಥಿಕ ತಜ್ಞರ ಸಲಹೆಯನ್ನು ಗಣನೆಗೆ ತೆಗೆದುಕೊಳ್ಳದ ಸರ್ಕಾರವು ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಹರಣಗೊಳಿಸಲು ಹೊರಟಿದೆ. ಹಾಗಾಗಿ ಆದೇಶ
ಪ್ರತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದ್ದಾರೆ.

ಈ ವೇಳೆ ಪ್ರತಿಭಟನೆಯಲ್ಲಿದ್ದ ಐಎನ್‌ ಟಿಯುಸಿ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ ಮುಖಂಡರಾದ ಕೆ.
ಸೋಮಶೇಖರ್‌, ಎ.ಆರ್‌.ಎಂ. ಇಸ್ಮಾಯಿಲ್‌, ಜೆ. ಸತ್ಯಬಾಬು, ಎಚ್‌.ಎ.ಆದಿಮೂರ್ತಿ, ಆರ್‌. ಸೋಮಶೇಖರ್‌ಗೌಡ, ಎ. ದೇವದಾಸ್‌, ಹಿರಿಯ ಕಾರ್ಮಿಕ ಮುಖಂಡರಾದ ಟಿ.ಜಿ.ವಿಠ್ಠಲ್‌, ಚನ್ನಪ್ಪ, ಸಂಗನಕಲ್ಲು ಕಟ್ಟೆಬಸಪ್ಪ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.