Rain: ರಾಜ್ಯದಲ್ಲಿ ಮಳೆ ಕೊರತೆ, ಸಜ್ಜಾಗಬೇಕಾಗಿದೆ ಸರಕಾರ


Team Udayavani, Aug 18, 2023, 11:37 PM IST

rain 2

ರಾಜ್ಯದಲ್ಲಿ ಮತ್ತೆ ಮಳೆ ಕೊರತೆ ಕಾಣಿಸಿದ್ದು, ಬರಗಾಲ ಎದುರಾಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ಜುಲೈಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಬಂದಿದೆ. ಆದರೆ ಜೂನ್‌ನಲ್ಲಿ ತಡವಾಗಿ ಮುಂಗಾರು ಆರಂಭವಾಗಿದ್ದು, ಸರಿಯಾಗಿ ಮಳೆಯೂ ಆಗಿರಲಿಲ್ಲ. ಈ ಕೊರತೆಯನ್ನು ಜುಲೈ ತಿಂಗಳಲ್ಲಿ ಸುರಿದ ಮಳೆ ನೀಗಿಸಿತ್ತು. ಈಗ ಆಗಸ್ಟ್‌ನಲ್ಲಿ ರಾಜ್ಯದೆಲ್ಲೆಡೆ ಮಳೆ ಕೊರತೆ ಕಾಣಿಸುತ್ತಿದ್ದು, ಬಿಸಿಲ ಝಳವೂ ಹೆಚ್ಚಾಗಿದೆ.

ಸದ್ಯದಲ್ಲಿ ರಾಜ್ಯ ಅಪಾಯಕಾರಿ ಪರಿಸ್ಥಿತಿ ಎದುರಿಸುತ್ತಿದೆ. ಒಂದು ಕಡೆ ಮಳೆ ಕಡಿಮೆಯಾಗಿದ್ದರೆ, ಬಿಸಿಲ ಝಳ ಹೆಚ್ಚಳದಿಂದಾಗಿ ಪೈರು ಒಣಗುತ್ತಿವೆ. ಬಿತ್ತನೆ ಮಾಡಿದ್ದ ರೈತ ಈಗ ಕಂಗಾಲಾಗಿ ಕುಳಿತಿದ್ದಾನೆ. ಆದರೆ ಜುಲೈ ತಿಂಗಳಲ್ಲಿ ಮತ್ತು ಆಗಾಗ್ಗೆ ಬಂದು ಹೋಗುತ್ತಿರುವ ಮಳೆ, ಬರಗಾಲದ ಘೋಷಣೆಗೂ ಅಡ್ಡಿ ಮಾಡುತ್ತಿದೆ.

ರಾಜ್ಯದಲ್ಲಿ ಆಗಸ್ಟ್‌ನಲ್ಲಿ ಶೇ.70ರಷ್ಟು ಮಳೆ ಕೊರತೆ ಕಂಡಿದೆ. ಕಳೆದ 10 ವರ್ಷಗಳಲ್ಲೇ ದಾಖಲೆಯ ತಾಪಮಾನವೂ ಕಾಣಿಸಿಕೊಂಡಿದೆ. ಅಲ್ಲದೆ ಜೂನ್‌ನಿಂದ ಇಲ್ಲಿವರೆಗೆ ಶೇ.25ರಷ್ಟು ಮಳೆ ಕೊರತೆ ಕಾಣಿಸಿಕೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಶೇ.70, ಉತ್ತರ ಒಳನಾಡು ಶೇ.74, ಮಲೆನಾಡು ಶೇ.81, ಕರಾವಳಿ ಶೇ.73ರಷ್ಟು ಮಳೆ ಕೊರತೆ ಕಾಣಿಸಿಕೊಂಡಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕ ಹೊರತುಪಡಿಸಿದರೆ, ಮಧ್ಯಕರ್ನಾಟಕ, ಬೆಂಗಳೂರು, ಮೈಸೂರು ಭಾಗಗಳಲ್ಲಿ ಹೆಚ್ಚು ಮಳೆ ಕೊರತೆಯಾಗಿದೆ.

ಇನ್ನು ಕಾವೇರಿ ಮತ್ತು ಕೃಷ್ಣ ನದಿಗಳು ಹುಟ್ಟುವ ಪ್ರದೇಶಗಳಲ್ಲೂ ಮಳೆ ಕಡಿಮೆಯಾಗಿರುವ ಕಾರಣ, ಸರಿಯಾದ ಪ್ರಮಾಣದಲ್ಲಿ ನೀರು ಹರಿದುಬರುತ್ತಿಲ್ಲ. ಕಳೆದ ವರ್ಷದ ಇದೇ ಅವಧಿಯಲ್ಲಿ ರಾಜ್ಯದ ಎಲ್ಲ ಜಲಾಶಯಗಳಲ್ಲಿ ಶೇ.75ಕ್ಕಿಂತ ಹೆಚ್ಚು ನೀರಿತ್ತು. ಆದರೆ ಈಗ ಶೇ.50ಕ್ಕಿಂತ ಕಡಿಮೆ ಪ್ರಮಾಣದಲ್ಲಿ ನೀರಿದೆ. ಮೊದಲೆ ಹೇಳಿದ ಹಾಗೆ, ಮಳೆ ಕೊರತೆಯ ನಡುವೆ, ಭಾರೀ ಪ್ರಮಾಣದ ಬಿಸಿಲು ಕಾಣಿಸಿಕೊಂಡಿರುವುದು ಆತಂಕಕ್ಕೆಡೆಮಾಡಿದೆ. ಬೆಳೆದು ನಿಂತಿರುವ ಪೈರು, ಮಳೆ ಇಲ್ಲದೆ ಬತ್ತಿದ್ದು, ಈಗ ಸುಡು ಬಿಸಿಲಿನಿಂದಾಗಿ ಒಣಗುವ ಹಂತಕ್ಕೆ ಬರುತ್ತಿದೆ.

ಈ ಎಲ್ಲ ಸಮಸ್ಯೆಗಳ ನಡುವೆ ರಾಜ್ಯದ ರೈತರು, ಜನ ಒದ್ದಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಸಂಕಷ್ಟದ ದಿನಗಳು ಗ್ಯಾರಂಟಿಯಾಗುತ್ತವೆ. ಕುಡಿಯುವ ನೀರಿಗೂ ಸಮಸ್ಯೆ ಬಂದೊದಗುವ ಸಾಧ್ಯತೆಗಳು ದಟ್ಟವಾಗಿವೆ. ಹೀಗಾಗಿ ರಾಜ್ಯ ಸರಕಾರ ಈಗಿನಿಂದಲೇ ಬರ ಎದುರಿಸಲು ಸಜ್ಜಾಗಬೇಕಾಗಿದೆ. ಸದ್ಯದ ಮಟ್ಟಿಗೆ ಕೇಂದ್ರ ಸರಕಾರದ ನಿಯಮಗಳಿಂದಾಗಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೇಂದ್ರದಿಂದ ಪರಿಹಾರದ ಹಣ ಬರುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೇಂದ್ರ ಸರಕಾರದ ಜತೆಗೆ ಮಾತನಾಡಬೇಕು. ಬರಗಾಲ ಘೋಷಣೆಗಿರುವ ಅಡ್ಡಿಗಳನ್ನು ನಿವಾರಣೆ ಮಾಡಬೇಕು. ಜತೆಗೆ ರಾಜ್ಯ ಸರಕಾರ ಪರ್ಯಾಯ ಕ್ರಮಗಳತ್ತಲೂ ಕಣ್ಣು ಹಾಯಿಸಬೇಕು. ಸಚಿವ ಚಲುವರಾಯಸ್ವಾಮಿ ಅವರು ಇನ್ನೊಂದು ವಾರದಲ್ಲಿ ಮಳೆ ಬರುವ  ನಿರೀಕ್ಷೆ ಇದೆ. ಇದನ್ನು ನೋಡಿಕೊಂಡು ಮುಂದಿನ ಹೆಜ್ಜೆ ಇಡುತ್ತೇವೆ ಎಂದಿದ್ದಾರೆ. ಸದ್ಯಕ್ಕೆ ಸಚಿವರು ಹೇಳಿರುವುದು ಉಚಿತವೇ ಆಗಿದ್ದರೂ, ಒಂದು ವೇಳೆ ಮಳೆಯಾಗದಿದ್ದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ಈಗಿನಿಂದಲೇ ಯೋಚನೆ ಮಾಡಬೇಕು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳೂ ಗಮನ ಹರಿಸಬೇಕು. ಸರಕಾರದ ಮುಂದೆ ರೈತರ ಹಿತ ಕಾಪಾಡುವ ಜತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಜವಾಬ್ದಾರಿಯೂ ಇರುವುದರಿಂದ ಸಮರೋಪಾದಿಯಲ್ಲಿ ತಯಾರಿ ನಡೆಸಬೇಕು.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.