ಪರೀಕ್ಷೆ ಸಿದ್ಧತೆಗೆ ಅಧ್ಯಯನ ಸಾಮಗ್ರಿ ಕೊರತೆ
Team Udayavani, Apr 12, 2020, 6:09 AM IST
ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಅಧ್ಯಯನ ಸಾಮಗ್ರಿ ಕೊರತೆ ಎದುರಿಸುತ್ತಿದ್ದಾರೆ.
ಇದು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರ ಸಮಸ್ಯೆ ಯಲ್ಲ, ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಿಗೂ ಇದೇ ಸಮಸ್ಯೆ ಎದುರಾಗುತ್ತಿದೆ.
ಕೋವಿಡ್ 19ದಿಂದಾಗಿ ಅಧ್ಯಯನಕ್ಕೆ ಪೂರಕವಾಗಿರುವ ಪುಸ್ತಕಗಳನ್ನು ಖರೀದಿ ಸಲು ಸಾಧ್ಯವಾಗುತ್ತಿಲ್ಲ. ಪುಸ್ತಕದ ಮಳಿಗೆಗಳು ಬಂದ್ ಆಗಿದೆ. ಅಲ್ಲದೆ, ಮಾರ್ಗದರ್ಶಕರಲ್ಲಿರುವ ಅಧ್ಯಯನ ಸಾಮಗ್ರಿಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಂಶೋಧನಾಶೀಲ ಅಭ್ಯರ್ಥಿಗಳು ನೋವು ತೋಡಿಕೊಂಡಿದ್ದಾರೆ.
ಗ್ರಂಥಾಲಯ ಇಲ್ಲ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರಿಗೆ ಗ್ರಂಥಾಲಯ ಒಂದು ರೀತಿಯ ಶಕ್ತಿಕೇಂದ್ರ. ದಿನಪತ್ರಿಕೆ, ವಾರಪತ್ರಿಕೆ, ಸಾಮಾನ್ಯ ಜ್ಞಾನದ ಪುಸ್ತಕಗಳು ಹೀಗೆ ಅಧ್ಯಯನಕ್ಕೆ ಅವಶ್ಯವಿರುವ ಅನೇಕ ರೀತಿಯ ಸಾಮಗ್ರಿಗಳು ಇಲ್ಲಿ ಲಭ್ಯವಿರುತ್ತವೆ. ಈಗ ಗ್ರಂಥಾಲಯಗಳು ಬಾಗಿಲು ಮುಚ್ಚಿ ರುವುದರಿಂದ ಅಧ್ಯಯನ ಸಾಮಗ್ರಿ ಪಡೆಯುವುದೇ ಕಷ್ಟವಾಗಿದೆ ಎಂದು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.
ಗ್ರಂಥಾಲಯ ಇಲಾಖೆಯಿಂದ ಡಿಜಿಟಲ್ ವ್ಯವಸ್ಥೆ ಮಾಡಲಾಗಿದೆ. ಇಲಾಖೆಯ ವೆಬ್‌ಸೈಟ್ ಮೂಲಕ ಸುಲಭವಾಗಿ ಪುಸ್ತಕಗಳನ್ನು ಪಡೆದು ಓದಬಹುದಾಗಿದೆ. ಅಲ್ಲದೆ, ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಪುಸ್ತಕಗಳನ್ನು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಓದಬಹುದಾಗಿದೆ.
– ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.