Fraud Case 120ಕ್ಕೂ ಅಧಿಕ ಮಂದಿಗೆ ಲಕ್ಷಾಂತರ ರೂ. ವಂಚನೆ: ಬಂಧನಕ್ಕೆ ಆಗ್ರಹ
Team Udayavani, Jun 11, 2024, 11:42 PM IST
ಮಂಗಳೂರು: ಬಲ್ಮಠದ ಲಕ್ಷ್ಮೀ ಟವರ್ನಲ್ಲಿ ಕಚೇರಿ ಹೊಂದಿದ್ದ “ಕೆನರಾ ಫಿಶ್ ಫಾರ್ಮರ್ ವೆಲ್‌ಫೇರ್ ಪ್ರೊಡ್ನೂಸರ್ ಕಂಪೆನಿ’ ಮಂಗಳೂರು ಮತ್ತು ಕೇರಳ ಭಾಗದ 120 ಮಂದಿಗೆ ಒಟ್ಟು 55.18 ಲ.ರೂ. ವಂಚಿಸಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳನ್ನು ಬಂಧಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಹಾಗೂ ವಂಚನೆಗೊಳಗಾದವರು ಆಗ್ರಹಿಸಿದ್ದಾರೆ.
ಹೆಚ್ಚು ಲಾಭಾಂಶ ನೀಡುವುದಾಗಿ ಹೂಡಿಕೆ ಮಾಡಿಸಿ ವಂಚಿಸಲಾಗಿದೆ. ಈಗ ಸಂಸ್ಥೆಯ ಮಂಗಳೂರಿನ ಕಚೇರಿ ಮುಚ್ಚಲ್ಪಟ್ಟಿದೆ. ಈ ಕಂಪೆನಿಯು ಕರ್ನಾಟಕ ಮಾತ್ರವಲ್ಲದೆ ಕೇರಳ ರಾಜ್ಯದಲ್ಲಿಯೂ ಬೇರೆ ಬೇರೆ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಮಾಹಿತಿ ಇದೆ. ನೂರಾರು ಗ್ರಾಹಕರಿಗೆ 100 ಕೋ.ರೂ.ಗಳಿಗೂ ಅಧಿಕ ಮೊತ್ತವನ್ನು ವಂಚಿಸಿರುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಈಗಾಗಲೇ 120 ಮಂದಿ ಸಂತ್ರಸ್ತರು ದೂರು ನೀಡಿದ್ದಾರೆ. ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಂಪೆನಿಗೆ ಸಂಬಂಧಿಸಿದವರನ್ನು ಬಂಧಿಸಿ ಸಂತ್ರಸ್ತರ ಹಣ ವಾಪಸ್ ಕೊಡಿಸಬೇಕು. ಇಂತಹ ವಂಚನೆ ಮಾಡುವ ಕಂಪೆನಿಗಳು ಕಾರ್ಯಾಚರಿಸದಂತೆ ತಡೆಯಲು ಕ್ರಮಕೈಗೊಳ್ಳಬೇಕು ಎಂದು ತುಳುನಾಡ ರಕ್ಷಣ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.