ರಮೇಶ ಅಣ್ಣಾ ವಿರುದ್ಧ ಲಕ್ಷ್ಮೀ ಅಕ್ಕ ಗೋಕಾಕದಲ್ಲಿ ಸ್ಪರ್ಧೆ!
Team Udayavani, Feb 15, 2023, 6:02 AM IST
ವಿಧಾನಸಭೆ ಚುನಾವಣೆ ದಿನಗಳು ಹತ್ತಿರವಾಗುತ್ತಿದ್ದಂತೆ ಅಂತೆ ಕಂತೆಗಳಿಗೆ ರೆಕ್ಕೆ ಪುಕ್ಕ ಬಂದಿದೆ. ಗೋಕಾಕದಲ್ಲಿ ಜಾರಕಿಹೊಳಿ ಕುಟುಂಬ ಸೋಲಿಸಬೇಕು ಎಂಬ ಕಾರಣದಿಂದ ಪಂಚಮಸಾಲಿ ಸಮಾಜದ ಕೆಲ ಮುಖಂಡರು ಜಾರಕಿಹೊಳಿ ಬದ್ಧ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳ್‌ಕರ ಹೆಸರನ್ನು ಗೋಕಾಕ ಕ್ಷೇತ್ರದಿಂದ ತೇಲಿಬಿಟ್ಟಿದ್ದಾರೆ.
ಈ ಸುದ್ದಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಹಳ ಜೋರಾಗಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಮೇಲಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ ಸಹ ಆಗಾಗ ಪಕ್ಷದ ಹೈಕಮಾಂಡ್ ಹೇಳಿದರೆ ನಾನು ಗೋಕಾಕದಿಂದ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿರುವುದು ಇದಕ್ಕೆ ಇಂಬು ನೀಡಿದೆ. ಇದಕ್ಕೆ ಪೂರಕವಾಗಿ ಗೋಕಾಕದ ಪಂಚಮಸಾಲಿ ಮುಖಂಡರು ಕೂಡಲಸಂಗಮ ಪಂಚಮಸಾಲಿ ಸ್ವಾಮೀಜಿ ಅವರನ್ನು ಭೇಟಿಯಾಗಿ ಗೋಕಾಕದಿಂದ ಹೆಬ್ಬಾಳಕರ ಅವರನ್ನು ನಿಲ್ಲಿಸಲು ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ. ಅಚ್ಚರಿ ಪಡಬೇಕಾದ ಸಂಗತಿ ಎಂದರೆ ಈ ರೀತಿ ಮನವಿ ಮಾಡಿದವರಲ್ಲಿ ಜೆಡಿಎಸ್ ಮುಖಂಡರು ಸೇರಿದ್ದಾರೆ!
ಜತೆಗೆ ಈ ನಾಯಕರು ಗೋಕಾಕದಿಂದ ಚುನಾವಣೆಗೆ ಸ್ಪರ್ಧೆ ಮಾಡುವ ಆಕಾಂಕ್ಷಿಗಳು ಕೂಡ ಹೌದು. ಹೆಬ್ಬಾಳಕರ ಗೋಕಾಕದಿಂದ ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದ್ದೇ ಆದರೆ ಆಗ ಜಿಲ್ಲೆಯ ರಾಜಕೀಯ ಚಿತ್ರಣವೇ ಸಂಪೂರ್ಣ ಬದಲಾಗುವುದು ಸುಳ್ಳಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.