ಕೇಸ್ ಹಾಕಿದರೂ ನಾವು ಬಗ್ಗಲ್ಲ: ಲಕ್ಷ್ಮೀ ಹೆಬ್ಟಾಳಕರ್
Team Udayavani, Oct 19, 2020, 3:50 PM IST
ಬೆಳಗಾವಿ: ಎಲ್ಲ ರಂಗಗಳಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರಕ್ಕೆ ಮಹಿಳಾ ದನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಟಾಳಕರ್ ಹೇಳಿದರು. ರವಿವಾರ ಕಾಂಗ್ರೆಸ್ ಭವನದ ಅವರಣದಲ್ಲಿ ಕ್ಯಾಂಟೀನ್ ಉದ್ಘಾಟನಾ
ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರ
ದುರುಪಯೋಗಪಡಿಸಿಕೊಂಡು ಆರ್. ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಮಹಿಳೆ ಎಂಬ ಕಾರಣದಿಂದ ಕುಸುಮಾ ಅವರಿಗೆ ತೊಂದರೆ ಕೊಡಲು ಆರಂಭಿಸಿದೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ.
ಶಿರಾ ಹಾಗೂ ಆರ್.ಆರ್.ನಗರ ಎರಡರಲ್ಲೂ ಕಾಂಗ್ರೆಸ್ ಪರ ವಾತಾವರಣ ಇದೆ. ಬಿಜೆಪಿ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ. ಇದಕ್ಕೆ ಜನರೇ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದರು.
ರಾಜ್ಯದಲ್ಲಿ ಕೊರೊನಾ ಹಾಗೂ ಭೀಕರ ಪ್ರವಾಹದಿಂದ ಜನರು ಬಹಳ ತೊಂದರೆಯಲ್ಲಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಮೋದಿ ಸರ್ಕಾರ ಕೇವಲ ಘೋಷಣೆಗೆ ಸೀಮೀತವಾಗಿದೆ.
ಇದನ್ನೂ ಓದಿ:ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದರೆ ಮೂರು ತಿಂಗಳು ಪರವಾನಗಿ ಅಮಾನತು!
ಲಾಕ್‌ಡೌನ್ ಬಳಿಕ ಪ್ರಧಾನಿ ಮೋದಿ 20 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಪ್ರಕಟ ಮಾಡಿದರು. ಅದರಲ್ಲಿ ಇದುವರೆಗೆ ಕರ್ನಾಟಕಕ್ಕೆ ಎಷ್ಟು ಹಣ ಬಂದಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಸರ್ಕಾರ ಸಹ ಹೇಳುತ್ತಿಲ್ಲ ಎಂದರು. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರು ಅಭ್ಯರ್ಥಿಯಾಗಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವದಿಲ್ಲ. ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧೆ ಮಾಡುವುದಿಲ್ಲ.
ನಮ್ಮ ಕ್ಷೇತ್ರದಲ್ಲಿ ಇನ್ನೂ ಮಾಡುವ ಕೆಲಸಗಳು ಸಾಕಷ್ಟಿವೆ. ಈ ಹಿನ್ನೆಲೆಯಲ್ಲಿ ತಮ್ಮ ಸಹೋದರ ಅಥವಾ ಪುತ್ರ ಸೇರಿದಂತೆ ಯಾರೊಬ್ಬರೂ ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.