ಭೂಮಿ ಮರಳಿಸಿ: ಅರಣ್ಯ ಇಲಾಖೆಗೆ ಸೂಚನೆ
Team Udayavani, Nov 16, 2021, 11:38 PM IST
ಬೆಂಗಳೂರು: ಚಕ್ರಾ, ಸಾವೇಹಕ್ಲು ಹಾಗೂ ಮಾಣೆ ಯೋಜನೆಗಳಿಗೆ ಸಂಬಂಧಿಸಿ ಅರಣ್ಯ ಇಲಾಖೆಯು ಅನಧಿಕೃತವಾಗಿ ನೋಟಿಫಿಕೇಶನ್ ಮಾಡಿರುವ ಭೂ ಪ್ರದೇಶವನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಅನಧಿಕೃತವಾಗಿ ವಶಪಡಿಸಿರುವ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಮಂಗಳವಾರ ಅರಣ್ಯ ಸಚಿವ ಉಮೇಶ್ ಕತ್ತಿ ಹಾಗೂ ಅರಣ್ಯಾಧಿಕಾರಿ ಜತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ವಶದಲ್ಲಿರುವ ಅನ ಧಿಕೃತ ಭೂಮಿಯಲ್ಲಿ ಈಗಾ ಗಲೇ ಜನವಸತಿಯ ಪ್ರದೇಶ ವಾಗಿದೆ. ಇಲ್ಲಿ ಶಾಲೆ, ಆಸ್ಪತ್ರೆ ಹಾಗೂ ಇನ್ನಿತರ ಸರಕಾರಿ ಸಾರ್ವಜನಿಕ ಸೇವೆ ಪ್ರಾರಂಭವಾಗಿದೆ. ಕಳೆದ ಮೂರು ದಶಕಗಳಿಗೂ ಹೆಚ್ಚಿನ ಸಮಯದಿಂದ ನನೆಗುದಿಗೆ ಬಿದ್ದಿರುವ ಜ್ವಲಂತ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದು ಹೇಳಿದರು.
ಇದನ್ನೂ ಓದಿ:ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ
ಅರಣ್ಯ ಸಚಿವ ಉಮೇಶ್ ಕತ್ತಿ ಮಾತ ನಾಡಿ, ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಮಸ್ಯೆಗೆ, ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಿದರು. ಜತೆಗೆ ಅಗತ್ಯವಿದ್ದರೆ ಸಂಪುಟ ಸಭೆಯಲ್ಲಿಯಲ್ಲಿ ಪ್ರಸ್ತಾವಿಸಲಾಗು ವುದು ಎಂದು ತಿಳಿಸಿದರು.ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸಹಿತ ಪ್ರಮುಖರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು