ಭಾರತೀಯ ಬ್ರಾಂಡ್ ಲಾವಾದಿಂದ ಮೊದಲ 5ಜಿ ಸ್ಮಾರ್ಟ್ ಫೋನ್ ಬಿಡುಗಡೆ : ಬೆಲೆ ಎಷ್ಟು ಗೊತ್ತಾ?
Team Udayavani, Nov 11, 2021, 10:00 AM IST
ಭಾರತೀಯ ಸ್ಮಾರ್ಟ್‌ಫೋನ್ ಬ್ರಾಂಡ್, ಲಾವಾ ಇಂಟರ್‌ನ್ಯಾಶನಲ್ ಲಿಮಿಟೆಡ್, ತನ್ನ ಮೊದಲ 5G ಸ್ಮಾರ್ಟ್‌ಫೋನ್- AGNI ಯನ್ನು ಬಿಡುಗಡೆ ಮಾಡಿದೆ.
ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 810 ಚಿಪ್ ಸೆಟ್ ಹೊಂದಿದೆ. 128 ಜಿಬಿ ಆಂತರಿಕ ಸಂಗ್ರಹ ಹಾಗೂ 8 ಜಿಬಿ ರ್ಯಾಮ್ ಇದ್ದು, 6.78 ಇಂಚಿನ ಐಪಿಎಸ್ ಎಲ್‍ಸಿಡಿ ಪರದೆ ಹೊಂದಿದೆ.
64 ಮೆ.ಪಿ. ಮುಖ್ಯ ಕ್ಯಾಮರಾ, ಜೊತೆಗೆ 5 MP ವೈಡ್ ಆಂಗಲ್ ಕ್ಯಾಮರಾ, 2 MP ಡೆಪ್ತ್ ಕ್ಯಾಮರಾ ಮತ್ತು 2 MP ಮ್ಯಾಕ್ರೋ ಕ್ಯಾಮರಾ ಅಳವಡಿಸಲಾಗಿದೆ. ಸೆಲ್ಫಿಗಳಿಗಾಗಿ 16 MP ಮುಂಬದಿ ಕ್ಯಾಮೆರಾವನ್ನು ಸಹ ಹೊಂದಿದೆ. ಅಲ್ಟ್ರಾಎಚ್‌ಡಿ, ಅಲ್ಟ್ರಾವೈಡ್, ಸೂಪರ್‌ನೈಟ್, ಪ್ರೊ ಮೋಡ್, ಎಐ ಮೋಡ್ ಮುಂತಾದ 10 ಅಂತರ್ಗತ ಕ್ಯಾಮೆರಾ ಮೋಡ್‌ಗಳಿವೆ.
5000 mAh ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ 30W ಸೂಪರ್‌ಫಾಸ್ಟ್ ಚಾರ್ಜರ್ ಇದೆ.
ಈ ಫೋನ್‍ನ ಬೆಲೆ 19,999 ರೂ.ಆಗಿದ್ದು, ನವೆಂಬರ್ 18ರಿಂದ ಎಲ್ಲ ರೀಟೇಲರ್ ಹಾಗೂ ಅಮೆಜಾನ್, ಫ್ಲಿಪ್‍ಕಾರ್ಟ್ ನಲ್ಲಿ ದೊರಕಲಿದೆ.
ಇದನ್ನೂ ಓದಿ : ಗ್ರಾಮೀಣ ಪ್ರದೇಶದಲ್ಲಿ 5ಜಿ ಸೌಲಭ್ಯ : ವಿಐ-ನೋಕಿಯಾ ಯಶಸ್ವಿ ಪ್ರಯೋಗ
ಲಾವಾ ಇ-ಸ್ಟೋರ್‌ನಲ್ಲಿ ಮತ್ತು ಅಮೆಜಾನ್‌ನಲ್ಲಿ 500 ರೂ. ಮುಂಗಡ ಪಾವತಿಸಿದರೆ 17, 999 ರೂ.ಗೆ ದೊರಕಲಿದೆ. ಬುಕಿಂಗ್ ತೆರೆದಿದ್ದು, ನವೆಂಬರ್ 17 ರವರೆಗೆ ಈ ಆಫರ್ ಲಭ್ಯವಿರುತ್ತದೆ.
ಲಾವಾ ಇಂಟರ್‌ನ್ಯಾಶನಲ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಹಾರ ಮುಖ್ಯಸ್ಥ ಸುನಿಲ್ ರೈನಾ ಬಿಡುಗಡೆ ಕುರಿತು ಮಾತನಾಡುತ್ತಾ, AGNI 5G ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮತ್ತು ಭಾರತೀಯರು ಏನನ್ನು ಸಾಧಿಸಬಹುದು ಎಂಬುದನ್ನು ಪ್ರತಿನಿಧಿಸುವ ಫೋನ್. ಇದು ಸಂಪೂರ್ಣವಾಗಿ ಭಾರತದಲ್ಲಿಯೇ ತಯಾರಿಸಲ್ಪಟ್ಟಿದೆ ಎಂದರು.
ಮೀಡಿಯಾ ಟೆಕ್ ಪ್ರೊಸೆಸರ್ ಕಂಪೆನಿಯು, ಲಾವಾ ಜೊತೆಗೆ ದೀರ್ಘಕಾಲದ ಒಡನಾಟವನ್ನು ಹೊಂದಿದೆ. ಪ್ರಬಲವಾದ ಮುಖ್ಯವಾಹಿನಿಯ 5G ಸ್ಮಾರ್ಟ್‌ಫೋನ್ ಅನುಭವಗಳನ್ನು ನೀಡಲು ಲಾವಾ ಅಗ್ನಿ 5G ಅನ್ನು MediaTek Dimensity 810 ಪ್ರೊಸೆಸರ್ ನೊಂದಿಗೆ ತಯಾರಿಸಲಾಗಿದೆ ಎಂದು ಮೀಡಿಯಾ ಟೆಕ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅಂಕು ಜೈನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Water Price Hike: ಬಸ್ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.