ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆ
53,997 ಹೆ. ಪ್ರದೇಶದ ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ
Team Udayavani, Jan 2, 2025, 7:00 AM IST
ಉಡುಪಿ: ಅಡಿಕೆ ಕೃಷಿಕರನ್ನು ಕಂಗೆಡಿಸಿರುವ ಎಲೆಚುಕ್ಕೆ/ಹಳದಿ ಎಲೆ ರೋಗ ತಡೆಗೆ ಸಂಬಂಧಿಸಿ ಸುಮಾರು 54 ಸಾವಿರ ಹೆಕ್ಟೇರ್‌ನಲ್ಲಿ ಗಿಡ ಸಂರಕ್ಷಣೆಗಾಗಿ 225 ಕೋಟಿ ರೂ.ಗಳ ಪರಿಹಾರ ಒದಗಿಸುವಂತೆ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆ (ಸಿಪಿಸಿಆರ್‌ಐ)ಯ ಮೂಲಕ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸ ಲಾಗಿದೆ. ಅದು ಪರಿಶೀಲನೆ ಹಂತ ದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ತೋಟಗಾರಿಕೆ ಇಲಾಖೆ ಹಾಗೂ ಕೃಷಿಕರ ಹಂತದಲ್ಲಿ ಹಲವು ಕ್ರಮ ಗಳು ತೆಗೆದುಕೊಂಡಾಗ್ಯೂ ಪ್ರಸ್ತುತ ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಅಡಿಕೆ ಬೆಳೆಯುವ ಪ್ರಮುಖ 7 ಜಿಲ್ಲೆಗಳ 53,997 ಹೆಕ್ಟೇರ್ ಪ್ರದೇಶ ದಲ್ಲಿ ರೋಗ ಕಾಣಿಸಿಕೊಂಡಿರುವುದು ಬೆಳೆಗಾರರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ರೋಗ ಬಾಧಿತ ಗಿಡದ ಎಲೆ ಸಂಪೂರ್ಣ ಒಣಗಿ ಇಳುವರಿ ಕುಸಿಯುತ್ತದೆ.
ಸಮಿತಿಯ ಶಿಫಾರಸಿನಂತೆ ಫೈಟೋಸ್ಯಾನಿಟರಿ (ರೋಗ ಬಾಧಿತ ಸಸ್ಯದ ಭಾಗವನ್ನು ತೆಗೆದು ಮತ್ತು ನಾಶಪಡಿಸುವುದು) ಕ್ರಮಗಳ ಅಳವಡಿಕೆ, ಪೋಷಕಾಂಶ ನಿರ್ವಹಣೆ, ಸಸ್ಯ ಸಂರಕ್ಷಣೆ ಕ್ರಮಗಳ ಅಳವಡಿಕೆ ಹಾಗೂ ತಾಂತ್ರಿಕ ಮಾಹಿತಿ ಕುರಿತು ಬೆಳೆಗಾರರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.
ತಜ್ಞರ ಸಮಿತಿ ಭೇಟಿ
ರೋಗ ನಿಯಂತ್ರಣಕ್ಕೆ ಕೇಂದ್ರ ಸರಕಾರ ನೇಮಿಸಿರುವ ವೈಜ್ಞಾನಿಕ ತಜ್ಞರನ್ನು ಒಳಗೊಂಡ ಸಮಿತಿಯು ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದ.ಕ. ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಯ ಪರಿಹಾರಕ್ಕೆ ಕೆಲವು ಶಿಫಾರಸುಗಳನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದೆ.
ಕಳೆದ ವರ್ಷ ಸಹಾಯಧನ
2023-24ನೇ ಸಾಲಿನಲ್ಲಿ ನಷ್ಟ ಅನುಭವಿಸಿದ ಪ್ರತೀ ರೈತರಿಗೆ ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ.ಗಳಂತೆ ಗರಿಷ್ಠ 1.5 ಹೆಕ್ಟೇರ್ ವರೆಗೆ 6 ಸಾವಿರ ರೂ.ಗಳ ಸಸ್ಯ ಸಂರಕ್ಷಣ ಔಷಧಗಳನ್ನು 6,250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಲಾಗಿದೆ. 12,300 ರೈತರಿಗೆ 2.50 ಕೋ.ರೂ. ಸಹಾಯಧನ ನೀಡಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು
ಎಲೆಚುಕ್ಕೆ ರೋಗ ಬಾಧೆಯು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತೀ ಹೆಚ್ಚಿದ್ದರೆ ಉಡುಪಿಯಲ್ಲಿ ಅತೀ ಕಡಿಮೆಯಿದೆ. ಚಿಕ್ಕಮಗಳೂರು – 28,788 ಹೆಕ್ಟೇರ್, ಶಿವಮೊಗ್ಗ – 11,950 ಹೆಕ್ಟೇರ್, ಉ.ಕ. ಜಿಲ್ಲೆಯ 8,604 ಹೆಕ್ಟೇರ್, ದ.ಕ. ಜಿಲ್ಲೆಯ 3,623 ಹೆಕ್ಟೇರ್, ಹಾಸನದ 360 ಹೆಕ್ಟೇರ್, ಉಡುಪಿಯ 123 ಹೆಕ್ಟೇರ್ ಹಾಗೂ ಕೊಡಗಿನ 529 ಹೆಕ್ಟೇರ್‌ನಲ್ಲಿ ರೋಗ ಕಾಣಿಸಿಕೊಂಡಿದೆ. ಕಳೆದ ಬಾರಿಯೂ ಉಡುಪಿಯ 100 ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯ 3 ಸಾವಿರ ಹೆಕ್ಟೇರ್‌ನಲ್ಲಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಂಬಂಧಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳ ಲಾಗುತ್ತಿದೆ. ತಜ್ಞರ ಸಮಿತಿಯ ಶಿಫಾರಸಿನಂತೆ ರೈತರಿಗೆ ಸಸ್ಯ ಸಂರಕ್ಷಣೆ ಔಷಧ ವಿತರಿಸುತ್ತಿ ದ್ದೇವೆ. ಪರಿಹಾರಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
-ಎಸ್.ಎಸ್. ಮಲ್ಲಿಕಾರ್ಜುನ್,
ತೋಟಗಾರಿಕೆ ಇಲಾಖೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.