![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 29, 2020, 1:56 PM IST
ಹಾವೇರಿ: ನಗರದ ತಾಪಂ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ,
ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ ನ್ಯಾಯ ಮಂಡಳಿ ಆಶ್ರಯದಲ್ಲಿ ಪೊಲೀಸ್ ತನಿಖಾಧಿಕಾರಿಗಳಿಗೆ ಕಾನೂನು ಜಾಗೃತಿ ಕಾರ್ಯಾಗಾರ ಏರ್ಪಡಿಸಲಾಯಿತು.
ಕಾರ್ಯಾಗಾರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ ನ್ಯಾಯ, ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ-2015, ಲೈಂಗಿಕ ಅಪರಾಧಿಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ-2012 ಹಾಗೂ ತಿದ್ದುಪಡಿ ಕಾಯ್ದೆ-2019 ಮತ್ತು ನಿಯಮಗಳು-2020 ಜಾಗೃತಿ
ಮೂಡಿಸಲಾಯಿತು.
ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೀಗೌಡ ಕಾರ್ಯಾಗಾರ ಉದ್ಘಾಟಿಸಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ 2012 ಹಾಗೂ ತಿದ್ದುಪಡಿ-2019 ಮತ್ತು ನಿಯಮಗಳು 2020 ಕುರಿತು ಮಾತನಾಡಿದರು. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬಾಲ ನ್ಯಾಯಮಂಡಳಿ ಪ್ರಧಾನ ದಂಡಾಧಿಕಾರಿಗಳಾದ ಬಿ.ಆರ್. ಗುಡಿ
ಕಾಯ್ದೆ ಮಾಹಿತಿ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರು ಕೆ. ಶ್ರೀವಿದ್ಯಾ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ. ಪಾವಲಿ, ಸರ್ಕಾರಿ ಅಭಿಯೋಜಕರಾದ ಸರೋಜ ಕೂಡಲಮಠ, ಎಸ್.ಎಂ. ಗೆಜ್ಜಿಹಳ್ಳಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಮಲ್ಲಿಕಾರ್ಜುನ
ಮಠದ ಪಾಲ್ಗೊಂಡಿದ್ದರು.
You seem to have an Ad Blocker on.
To continue reading, please turn it off or whitelist Udayavani.