Agri: ಸಾವಯವ ಸಿರಿಧಾನ್ಯ ಮೇಳ ರೈತ ಸ್ನೇಹಿ ಆಗಿರಲಿ: ಸಚಿವ ಎನ್. ಚಲುವರಾಯಸ್ವಾಮಿ
Team Udayavani, Dec 20, 2023, 11:24 PM IST
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜ. 5ರಿಂದ 7 ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ರೈತ ಸ್ನೇಹಿ ಆಗಿರಬೇಕು. ಈ ನಿಟ್ಟಿನಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಶೇಷಾದ್ರಿ ರಸ್ತೆಯ ಕೃಷಿ ಆಯುಕ್ತ ಕಚೇರಿ ಸಭಾಂಗಣದಲ್ಲಿ ನಡೆದ ಮೇಳದ ಪೂರ್ವಭಾವಿ ಸಿದ್ಧತೆ ಪರಿಶೀಲನ ಸಭೆಯಲ್ಲಿ ಮಾತನಾಡಿ, ಸಿರಿಧಾನ್ಯಗಳ ಕೃಷಿ, ಅದರ ಉತ್ಪನ್ನಗಳ ಮೌಲ್ಯವರ್ಧನೆ, ವಿಭಿನ್ನ ಖಾದ್ಯ ತಯಾರಿಕೆ ಬಗ್ಗೆ ರೈತರಿಗೆ ಮಾಹಿತಿಗೆ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣ ಏರ್ಪಡಿಸಲು ತಿಳಿಸಿದರು.
ಮೇಳದ ಉದ್ಘಾಟನೆ, ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯದ ಸಚಿವರು ಪಾಲ್ಗೊಳ್ಳಲಿದ್ದು, ಶಿಷ್ಟಾಚಾರದಲ್ಲಿ ಯಾವುದೇ ಲೋಪ ಉಂಟಾಗದಂತೆ ಗಮನಹರಿಸುವಂತೆ ತಿಳಿಸಿದರು.
ಕೃಷಿ ಇಲಾಖೆ ಕಾರ್ಯದರ್ಶಿ ವಿ. ಅನ್ಶುಕುಮಾರ್, ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಡಾ| ಜಿ.ಟಿ. ಪುತ್ರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.