ಅತಿಥಿ ಉಪನ್ಯಾಸಕರಿಗೆ ತಪ್ಪು ಸರಿಪಡಿಸಲು ಅವಕಾಶ
Team Udayavani, Feb 12, 2022, 6:25 AM IST
ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆ ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವೇಳೆ ಆಗಿರುವ ತಪ್ಪು ಮಾಹಿತಿಯನ್ನು ಸರಿಪಡಿಸಲು ಫೆ. 13ರ ವರೆಗೆ ಸಮಯ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಅತಿಥಿ ಉಪನ್ಯಾಸಕರ ಹುದ್ದೆ ಗಳ ನೇಮಕಕ್ಕೆ ಈಗಾಗಲೇ ಮೊದಲನೇ ಸುತ್ತಿನ ಕೌನ್ಸೆಲಿಂಗ್ ಮುಗಿದಿದ್ದು, ಆಯ್ಕೆಯಾಗಿರುವ ಬಹುತೇಕರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಆದರೆ, ಕೆಲವರು ಅರ್ಜಿ ಸಲ್ಲಿಸುವಾಗ ಸೇವಾ ಅನುಭವ ವಿವರ, ಸ್ನಾತಕೋತ್ತರ ಪದವಿ ಅಂಕಗಳು, ಪಿ.ಎಚ್‌ಡಿ/ಎಂ.ಫಿಲ್ ಪದವಿಗೆ ಸಂಬಂಧಿಸಿದ ವಿವರಗಳನ್ನು ತಪ್ಪಾಗಿ ತುಂಬಿದ್ದು, ಇವುಗಳನ್ನು ಸರಿಪಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಫೆ.16ವರೆಗೆ ಪದವಿ ಕಾಲೇಜು ರಜೆ: ಸಚಿವ ಅಶ್ವತ್ಥನಾರಾಯಣ
ಅಭ್ಯರ್ಥಿಗಳು ವಾಸ್ತವ ಮಾಹಿತಿಯನ್ನು ಒದಗಿಸದೆ ಮತ್ತೆ ತಪ್ಪು ಮಾಡಿದಲ್ಲಿ ಅಂತಹವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.