Politics: “ನೈಸ್” ತಂದವರ ಬಗ್ಗೆಯೂ ಚರ್ಚೆಯಾಗಲಿ: ಎನ್.ಚಲುವರಾಯಸ್ವಾಮಿ
Team Udayavani, Aug 22, 2023, 9:06 PM IST
ಬೆಂಗಳೂರು: ರಾಜ್ಯದಲ್ಲಿ ನೈಸ್ ಯೋಜನೆ ಜಾರಿಗೆ ತಂದವರು ಯಾರು? ಪ್ರಾರಂಭ ಮಾಡಿದವರು ಯಾರು ? ಎಂಬುದೂ ಚರ್ಚೆಯಾಗಲಿ. ಕುಮಾರಸ್ವಾಮಿಯವರಿಗೆ ನೈಸ್ ವಿಚಾರ ಮಾತ್ರ ಸಾರ್ವಜನಿಕ ಹಿತದೃಷ್ಟಿಯ ಸಂಗತಿಯೇ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಯೋಜನೆ ಪ್ರಾರಂಭ ಮಾಡಿದವರು ಯಾರು ಎಂಬುದೂ ಚರ್ಚೆಯಾಗಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಬಹುದಿತ್ತಲ್ಲ? ರಾಜ್ಯದಲ್ಲಿ ಅದೆಷ್ಟೋ ರಸ್ತೆಗಳಿವೆ, ಟೋಲ್ ವಿಚಾರಗಳಿವೆ. ಎಲ್ಲವನ್ನೂ ಬಿಟ್ಟು ನೈಸ್ ರೋಡ್ ಮಾತ್ರ ಯಾಕೆ ಹಿಡಿದುಕೊಂಡಿದ್ದಾರೆ? ನಮ್ಮ ಕಾಂಗ್ರೆಸ್ ಸರ್ಕಾರ ನೈಸ್ ಪರವಾಗಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಜೆಡಿಎಸ್ ಹೆಸರಿರುವುದು, ಕುಮಾರಸ್ವಾಮಿ ಹೆಸರಿರುವುದು ಎಲ್ಲರಿಗೂ ಗೊತ್ತಿದೆ. ಈ ತರದ್ದೆಲ್ಲ ಎಷ್ಟು ನಡೆಸ್ತಾರೋ ನಡೆಸಲಿ. ಕೃಷಿ ಇಲಾಖೆ ಭ್ರಷ್ಟಾಚಾರದ ಆರೋಪ ತನಿಖೆ ಸಂದರ್ಭದಲ್ಲಿ ಇಬ್ಬರು ಕೃಷಿ ಅಧಿಕಾರಿಗಳ ಬಂಧನವಾಗಿದೆ. ಇದಕ್ಕೆ ಯಾರು ಕಾರಣ? ಹಿನ್ನೆಲೆ ಏನು ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.