ಮೋದಿ- ಶಾ ತೀರ್ಮಾನ ಏನೆಂದು ಯಾರಿಗ್ಗೊತ್ತು?: ಎಚ್ಡಿಡಿ
ಮಧ್ಯಂತರ ಚುನಾವಣೆಗೆ ನಾವು ಸಜ್ಜಾಗೋಣ ಎಂದ ಮಾಜಿ ಪ್ರಧಾನಿ
Team Udayavani, Aug 7, 2019, 5:45 PM IST
ಬೆಂಗಳೂರು:ಯಡಿಯೂರಪ್ಪ ಮೂರು ವರ್ಷ ಎಂಟು ತಿಂಗಳು ಅಧಿಕಾರ ನಡೆಸಲಿ, ನನ್ನದೇನೂ ಅಭ್ಯಂತರವಿಲ್ಲ. ಆದರೆ, ನರೇಂದ್ರಮೋದಿ ಹಾಗೂ ಅಮಿತ್ ಶಾ ಏನು ತೀರ್ಮಾನ ಕೈಗೊಳ್ಳುತ್ತಾರೋ ಯಾರಿಗೆ ಗೊತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ-ಅಮಿತ್ ಶಾ ಕೊಠಡಿಯಲ್ಲಿ ಪ್ರತ್ಯೇಕವಾಗಿ ಕುಳಿತು ಕೈಗೊಳ್ಳುವ ತೀರ್ಮಾನವೇ ಅಂತಿಮ. ಹೀಗಾಗಿ, ನಾನು ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೂ ಎದುರಿಸಲು ಸಜ್ಜಾಗುತ್ತಿದ್ದೇನೆ ಎಂದು ತಿಳಿಸಿದರು. ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ಯಾಕೆ ಮಾಡಿದಿರಿ ಎಂದು ಹಲವಾರು ಕಾರ್ಯಕರ್ತರು, ಮುಖಂಡರು ನನ್ನ ಬಳಿ ಕೇಳಿದ್ದುಂಟು. ಆದರೆ, ನಾನು ಯಾರನ್ನೂ ದೂಷಿಸಲು ಹೋಗುವುದಿಲ್ಲ. ನನ್ನ ಮೇಲೆಯೇ ತಪ್ಪು ಹಾಕಿಕೊಳ್ಳುತ್ತೇನೆ. ಆಗಿದ್ದರ ಬಗ್ಗೆ ಯೋಚಿಸಿ ಫಲವಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಹದಿನಾಲ್ಕು ತಿಂಗಳು ಹೇಗೆ ಕೆಲಸ ಮಾಡಿತು ಎಂಬುದು ಎಲ್ಲರಿಗೂ ಗೊತ್ತಿದೆ. ಕಷ್ಟದ ಪರಿಸ್ಥಿತಿಯಲ್ಲೂ ಕುಮಾರಸ್ವಾಮಿಯವರು ತಮ್ಮ ಕೈಲಾದ ಕೆಲಸ ಮಾಡಿದ್ದಾರೆ. ರೈತರು ಸೇರಿ ಎಲ್ಲ ವರ್ಗದ ಜನರಿಗೆ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ ಎಂದರು.
ಪುಣ್ಯಾತ್ಮರಿಗೆ ಒಳ್ಳೆಯದಾಗಲಿ
ತುಮಕೂರು ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದು ದೇವರ ತೀರ್ಮಾನ ಎಂದುಕೊಳ್ಳುತ್ತೇನೆ. ನನ್ನನ್ನು ಸೋಲಿಸಲು ಯತ್ನಿಸಿದ ಪುಣ್ಯಾತ್ಮರಿಗೆ ಮಹಾನುಭಾವರಿಗೆ ಒಳ್ಳೆಯದಾಗಲಿ. ನಾನು ಯಾರಿಗೂ ಕೆಡುಕು ಬಯಸುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.