ಉಪ ಕದನ ಮುನ್ನ ಲೋಕಲ್ ಫೈಟ್ ಟೆಸ್ಟ್
Team Udayavani, Oct 22, 2019, 3:09 AM IST
ಬೆಂಗಳೂರು: ಅನರ್ಹಗೊಂಡವರ 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್-ಜೆಡಿಎಸ್‌ಗೆ ಹದಿನಾಲ್ಕು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ “ಟೆಸ್ಟ್’ನಂತಾಗಿದ್ದು, ಸಮ್ಮಿಶ್ರ ಸರ್ಕಾರ ಪತನದ ನಂತರ ಎದುರಾಗಿರುವ ಈ ಟೆಸ್ಟ್‌ನಲ್ಲಿ ಶಕ್ತಿ ಪ್ರದರ್ಶನ ಅನಿವಾರ್ಯವಾಗಿದೆ.
ಉಪ ಚುನಾವಣೆ ನಡೆಯುವ ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳೂ ಸೇರಿ ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗೂ ಚುನಾವಣೆ ಇದೆ. ಇತ್ತೀಚೆಗಷ್ಟೇ ಉಪ ಚುನಾವಣೆ ಎದುರಿಸಿದ ಕುಂದಗೋಳ, ಡಿ.ಕೆ.ಶಿವಕುಮಾರ್ ಪ್ರಾಬಲ್ಯದ ಕನಕಪುರ, ಎಚ್.ಡಿ.ಕುಮಾರಸ್ವಾಮಿ ಪ್ರತಿಷ್ಠೆಯ ಮಾಗಡಿ ಪುರಸಭೆಗಳಿಗೂ ಚುನಾವಣೆ ನಡೆಯುತ್ತಿರುವುದರಿಂದ ಜಿದ್ದಾಜಿದ್ದಿ ಕಣವಾಗಲಿದೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಆಡಳಿತಾರೂಢ ಬಿಜೆಪಿಗೆ ಸೆಡ್ಡು ಹೊಡೆದು ತಮ್ಮ ಶಕ್ತಿ ಪ್ರದರ್ಶನದ ಸವಾಲಾದರೆ, ಬಿಜೆಪಿಗೆ ಇಲ್ಲೂ ಪ್ರತಿಪಕ್ಷಗಳನ್ನು ಮಣಿಸಿ ತಮ್ಮ ಸರ್ಕಾರಕ್ಕೆ ಜನಮನ್ನಣೆ ಇದೆ ಎಂದು ಸಾಬೀತುಪಡಿಸುವ ತವಕ ಎಂಬಂತಾಗಿದೆ.
ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಅವರಿಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಹೆಚ್ಚು ಸ್ಥಾನ ಗೆಲ್ಲಿಸಿಕೊಳ್ಳುವ ಹೊಣೆಗಾರಿಕೆಯಿದೆ. ಮಂಗಳವಾರ ಅಥವಾ ಬುಧವಾರ ಚುನಾವಣೆ ನಡೆಯುವ ಕ್ಷೇತ್ರಗಳ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರ ಸಭೆ ಕರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೆಡಿಎಸ್‌ನಲ್ಲಿ ಖುದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು “ಅಖಾಡ’ ಪ್ರವೇಶಿಸಿದ್ದು ಜಿಲ್ಲಾ ನಾಯಕರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ.
ಮೈತ್ರಿ ಡೌಟ್: ಕಾಂಗ್ರೆಸ್ ಹಾಗೂ ಜೆಡಿಎಸ್ ಬಹುತೇಕ ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡುವುದು ಖಚಿತ. ಸ್ಥಳೀಯ ಮಟ್ಟದಲ್ಲೂ ಯಾವುದೇ ರೀತಿಯ ಮೈತ್ರಿ ಅಸಾಧ್ಯ ಎಂಬ ಪರಿಸ್ಥಿತಿಯಿದೆ. ಆದರೆ, ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಜತೆಗೂ ಡಿಯೇ ಹೋರಾಟ ಮಾಡಿದ್ದರು. ಇದೀಗ ಕನಕಪುರ ಹಾಗೂ ಮಾಗಡಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಬೇಕಾಗಿದೆ. ಮಾಗಡಿಯಲ್ಲಿ ಮಾಜಿ ಶಾಸಕ ಎಚ್. ಸಿ.ಬಾಲಕೃಷ್ಣ ಕಾಂಗ್ರೆಸ್ ನೇತೃತ್ವ ವಹಿಸಬೇಕಾಗಿದೆ.
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಸನ್ನಿವೇಶ. ಸ್ಥಳೀಯ ಮಟ್ಟದ ಕಾರ್ಯಕರ್ತರು ಹಾಗೂ ಮುಖಂಡರು ಇದೀಗ ತಮ್ಮ ತಮ್ಮ ಪಕ್ಷದ ಪರ ಕೆಲಸ ಮಾಡಬೇಕಾಗಿದೆ. ಎರಡೂ ಪಕ್ಷಗಳಲ್ಲಿಯೂ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಇಲ್ಲಿ ಎರಡೂ ಪಕ್ಷಗಳಲ್ಲಿ ಟಿಕೆಟ್ ಸಿಗದವರು ಬಿಜೆಪಿ ಕದ ತಟ್ಟುವ ಸಾಧ್ಯತೆ ಹೆಚ್ಚಾಗಿದೆ. ಗಟ್ಟಿ ಮಾಡಿಕೊಳ್ಳಲು ಬಿಜೆಪಿ ಸಹ ಕೆಲವೆಡೆ ಸ್ಥಳೀಯ ಮಟ್ಟದ ಆಪರೇಷನ್ ಕಮಲ ಮಾಡಬಹುದೆಂದು ಹೇಳಲಾಗುತ್ತಿದೆ.
ದಾವಣಗೆರೆ, ಮಂಗಳೂರಿನಲ್ಲಿ ಬಿಜೆಪಿಯ ಹಿಡಿತ ಹೆಚ್ಚಾಗಿರುವುದರಿಂದ ಕಾಂಗ್ರೆಸ್ ಅಲ್ಲಿ ಹೆಚ್ಚು ಗಮನಹರಿಸಲು ನಿರ್ಧರಿಸಿದ್ದು, ಮಂಗಳೂರಿನಲ್ಲಿ ಯು.ಟಿ.ಖಾದರ್, ರಮಾನಾಥ್ ರೈ, ಐವಾನ್ ಡಿಸೋಜಾ ಸೇರಿ ಸ್ಥಳೀಯ ನಾಯಕರಿಗೆ ಹೆಚ್ಚು ಹೊಣೆಗಾರಿಕೆ ನೀಡಲು ತೀರ್ಮಾನಿಸಲಾಗಿದೆ. ಅದೇ ರೀತಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ತಲೆನೋವು: ಈ ಮಧ್ಯೆ, ಕಾಂಗ್ರೆಸ್‌ಗೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪಕ್ಷದಲ್ಲಿನ ಆಂತರಿಕ ಭಿನ್ನಮತ ತಲೆನೋವಾಗಿ ಪರಿಣಮಿಸಿದೆ. ಕೋಲಾರ, ಮುಳಬಾಗಿಲು, ಕೆಜಿಎಫ್ ನಗರಸಭೆಗೆ ಚುನಾವಣೆ ನಡೆಯುತ್ತಿದ್ದು, ಪ್ರತಿ ಕ್ಷೇತ್ರದಲ್ಲೂ ಎರಡರಿಂದ ಮೂರು ಬಣಗಳು ಹುಟ್ಟಿಕೊಂಡಿವೆ. ಕೋಲಾರದಲ್ಲಿ ತಮ್ಮ ಬೆಂಬಲಿಗರನ್ನು ಪಕ್ಷದಿಂದ ಅಮಾನತು ಮಾಡಿರುವುದರಿಂದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ದಿನೇಶ್ ಗುಂಡೂರಾವ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಇದೀಗ ಟಿಕೆಟ್ ನೀಡುವ ವಿಚಾರದಲ್ಲಿ ಕೆ.ಎಚ್.ಮುನಿಯಪ್ಪ ವರ್ಸಸ್ ನಸೀರ್ ಅಹಮದ್ ಎಂಬಂತಾಗಲಿದೆ. ಕೆಜಿಎಫ್ ಹಾಗೂ ಮುಳಬಾಗಿಲಿನಲ್ಲೂ ಇದೇ ರೀತಿಯ ಪರಿಸ್ಥಿತಿಯಿದೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮತ್ತು ಚಿಂತಾಮಣಿ ನಗರಸಭೆ ಚುನಾವಣೆ ವಿಚಾರದಲ್ಲೂ ಮಾಜಿ ಸಚಿವ ಶಿವಶಂಕರರೆಡ್ಡಿ ಹಾಗೂ ಮಾಜಿ ಸಂಸದ ವೀರಪ್ಪ ಮೊಯ್ಲಿ ಬಣಗಳ ನಡುವೆ ಟಿಕೆಟ್‌ಗೆ ಕಿತ್ತಾಟ ನಡೆಯಬಹುದೆಂದು ಹೇಳಲಾಗುತ್ತಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜೆಡಿಎಸ್ ಶಕ್ತಿಯುತ ವಾಗಿದ್ದು ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುವ ಅಭ್ಯರ್ಥಿಗಳ ಆಯ್ಕೆಗೆ ಸೂಚನೆ ನೀಡಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಜೆಡಿಎಸ್ ಹೆಚ್ಚಿನ ಪರಿಶ್ರಮ ಹಾಕಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯಗೆ “ಟಾಸ್ಕ್’: ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾದ ನಂತರ ಎದುರಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ತೋರಿಸಬೇಕಾಗಿದೆ. ಹೈಕಮಾಂಡ್ ಸಹ ನಿಮ್ಮ ಹೋರಾಟ ಬಿಜೆಪಿ ವಿರುದ್ಧ ಇರಲಿ ಎಂದು ನೇರವಾಗಿಯೇ ಹೇಳಿರುವುದರಿಂದ ಜೆಡಿಎಸ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲಬೇಕಾದ “ಟಾಸ್ಕ್’ ಎದುರಾಗಿದೆ. ಜೆಡಿಎಸ್‌ಗೂ ಈ ಚುನಾವಣೆ ಸೀಮಿತ ಕ್ಷೇತ್ರಗಳಲ್ಲಾದರೂ ಶಕ್ತಿ ಪ್ರದರ್ಶನ ಮಾಡಿ ತೋರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.