Google: ಲೊಕೇಶನ್ ಟ್ರ್ಯಾಕ್: ಗೂಗಲ್ಗೆ 700 ಕೋಟಿ ರೂ. ದಂಡ
Team Udayavani, Sep 16, 2023, 12:20 AM IST
ವಾಷಿಂಗ್ಟನ್: ಬಳಕೆದಾರರ ಅನುಮತಿ ಇಲ್ಲದೇ ಅವರು ಇರುವ ಸ್ಥಳವನ್ನು ಟ್ರ್ಯಾಕ್ ಮಾಡುವುದನ್ನು ಗೂಗಲ್ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾದ ನ್ಯಾಯಾಲಯ ಟೆಕ್ ದಿಗ್ಗಜ ಕಂಪೆನಿಗೆ ಬರೋಬ್ಬರಿ 700 ಕೋಟಿ ರೂ. ದಂಡ ವಿಧಿಸಿದೆ.
ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ರಾಬ್ ಬೊಂಟಾ ಅವರು ಗೂಗಲ್ ಕಂಪೆನಿ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಗೂಗಲ್ ಕಂಪೆನಿಯು ತನ್ನ ಬಳಕೆದಾರರನ್ನು ದಾರಿ ತಪ್ಪಿಸುತ್ತಿದೆ. ಲೊಕೇಶನ್ ಆಕ್ಸೆಸ್ ಡಿಸೇಬಲ್ ಮಾಡಿದರೆ, ಗ್ರಾಹಕರ ಸ್ಥಳವನ್ನು ಟ್ರ್ಯಾಕ್ ಮಾಡುವುದಿಲ್ಲ ಎಂದು ಕಂಪೆನಿ ಹೇಳುತ್ತದೆ. ಆದರೆ ತನ್ನ ವಾಣಿಜ್ಯ ಲಾಭಕ್ಕಾಗಿ, ಆಕ್ಸೆಸ್ ಡಿಸೇಬಲ್ ಮಾಡಿದರೂ, ಲೊಕೇಶನ್ ಟ್ರ್ಯಾಕ್ ಮಾಡುವುದು ಕಂಪೆನಿ ಮುಂದುವರಿಸಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಸಂಬಂಧ ಗೂಗಲ್ ಕಂಪೆನಿಗೆ ದೊಡ್ಡ ಮೊತ್ತದ ದಂಡ ವಿಧಿಸಿದೆ. ಗೂಗಲ್ನಲ್ಲಿ ಗ್ರಾಹಕರು ಹುಡುಕಾಟ ನಡೆಸಿದ್ದು ಮತ್ತು ಅವರಿರುವ ಸ್ಥಳಕ್ಕೆ ತಕ್ಕಂತೆ ಜಾಹೀರಾತುಗಳನ್ನು ಬಳಕೆದಾರರು ಗಮನಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
Canada; ಟ್ರಾಡೊ ಸರಕಾರ ಪತನಕ್ಕೆ ಸಿದ್ಧ: ಸಂಸದ ಘೋಷಣೆ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.