ಲಾಕ್‌ಡೌನ್ ಸಡಿಲಿಕೆಯಾಗಿ ಮೂರು ದಿನ ವಹಿವಾಟು ಯಥಾಸ್ಥಿತಿಗೆ
Team Udayavani, May 7, 2020, 5:35 AM IST
ಉಡುಪಿ: ಲಾಕ್‌ಡೌನ್ ಸಡಿಲಿಕೆಯಾಗಿ ಎರಡನೇ ದಿನವಾದ ಬುಧವಾರ ನಗರದಲ್ಲಿ ಜನಸಂಚಾರ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳ ವ್ಯಾಪಾರ ಯಥಾಸ್ಥಿತಿಗೆ ಮರಳಿದೆ.
ಬುಧವಾರ ಬೆಳಗ್ಗೆ 7ರಿಂದ ಸಂಜೆ 7ವರೆಗೆ ಎಲೆಕ್ಟ್ರಾನಿಕ್, ಚಿನ್ನಾಭರಣ ಮಳಿಗೆ, ಬಟ್ಟೆ ಮಳಿಗೆ ತೆರೆಯಲು ಅವಕಾಶ ನೀಡಿರುವುದರಿಂದ ಜನರು ಸರತಿ ಸಾಲಿನಲ್ಲಿ ಕಾದು ವಸ್ತುಗಳನ್ನು ಖರೀದಿಸುತ್ತಿರುವುದು ಕಂಡು ಬಂತು.
ದಿನಸಿ-ತರಕಾರಿ ಖರೀದಿ ವಿರಳ
ಒಂದೂವರೆ ತಿಂಗಳಲ್ಲಿ ಲಾಕ್‌ಡೌನ್ ಬಳಿಕ ಇದೇ ಮೊದಲ ಬಾರಿಗೆ ಉಡುಪಿ ನಗರದಲ್ಲಿ ದಿನಸಿ ಹಾಗೂ ತರಕಾರಿ ಖರೀದಿಸುವವರ ಸಂಖ್ಯೆ ಕಡಿಮೆ ಇತ್ತು. ಜಿಲ್ಲಾಡಳಿತ ಖರೀದಿಯ ಸಮಯವನ್ನು ವಿಸ್ತರಿಸಿರುವುದರಿಂದ ಇದಕ್ಕೆ ಕಾರಣವಿರಬಹುದು ಎನ್ನುವುದು ವ್ಯಾಪಾರಿಗಳ ಅಭಿಪ್ರಾಯ.
ವಾಹನ ಓಡಾಟ ಹೆಚ್ಚಳ
ನಗರದಲ್ಲಿ ಬಸ್ ವ್ಯವಸ್ಥೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜನರು ಬೆಳಗ್ಗೆಯಿಂದ ದ್ವಿಚಕ್ರ, ಕಾರು, ಆಟೋಗಳಲ್ಲಿ ಸಂಚರಿಸುತ್ತಿರುವುದು ಕಂಡು ಬಂತು. ನಗರದ ವಿವಿಧ ಕಡೆಗಳ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸರು ಬೇರೆ ಜಿಲ್ಲೆಯ ನಂಬರ್ ಹೊಂದಿರುವ ಪ್ರತಿಯೊಂದು ವಾಹನಗಳ ಮಾಹಿತಿಯನ್ನು ಪಡೆಯುತ್ತಿದ್ದರು.
ಹೊಟೇಲ್ ಪ್ರಾರಂಭ
ಇತ್ತ ನಗರದಲ್ಲಿ ಹೆಚ್ಚಿನ ಹೊಟೇಲ್‌ಗಳು ಕಾರ್ಯಾಚರಿಸಲಾರಂಭಿಸಿವೆ. ಗ್ರಾಹಕರಿಗೆ ಪಾರ್ಸೆಲ್‌ಗೆ ಅವಕಾಶ ನೀಡಲಾಗಿದೆ. ಕೆಲವು ಹೊಟೇಲ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾರ್ಸೆಲ್ ಪಡೆಯುತ್ತಿದ್ದರು.
ತೆರೆದ ಸರ್ವಿಸ್ ಸೆಂಟರ್
ಜಿಲ್ಲೆಯ ಗ್ರಾಮೀಣ ಭಾಗ ಸೇರಿದಂತೆ ನಗರದ ಸಣ್ಣ ಪುಟ್ಟ ವಾಹನ ಸರ್ವಿಸ್ ಸೆಂಟರ್ ತೆರೆದಿದ್ದು, ಸಾರ್ವಜನಿಕರು ಒಂದೂವರೆ ತಿಂಗಳ ಬಳಿಕ ವಾಹನಗಳನ್ನು ಸರ್ವಿಸ್‌ಗೆ ನೀಡುತ್ತಿರುವ ದೃಶ್ಯಗಳು ಕಂಡು ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.