ಲಾಕ್‌ಡೌನ್‌ ಸಂಕಷ್ಟ: ಚೈಲ್ಡ್‌ಲೈನ್‌ಗೆ ವಲಸೆ ಕಾರ್ಮಿಕರ ಆಹಾರ ಸಮಸ್ಯೆ ಕರೆಗಳು!

Team Udayavani, May 2, 2020, 5:43 AM IST

ಲಾಕ್‌ಡೌನ್‌ ಸಂಕಷ್ಟ: ಚೈಲ್ಡ್‌ಲೈನ್‌ಗೆ ವಲಸೆ ಕಾರ್ಮಿಕರ ಆಹಾರ ಸಮಸ್ಯೆ ಕರೆಗಳು!

ಸಾಂದರ್ಭಿಕ ಚಿತ್ರ.

ಮಂಗಳೂರು: ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆಗಾಗಿ ತೊಡಗಿಸಿಕೊಂಡಿರುವ ಚೈಲ್ಡ್‌ಲೈನ್‌-1098ಕ್ಕೆ ಮಕ್ಕಳ ಸಂಬಂಧಿ ಸಮಸ್ಯೆಗಳ ಕರೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ. ಆದರೆ, ಲಾಕ್‌ಡೌನ್‌ ಅವಧಿಯಲ್ಲಿ ಬಂದ ಕರೆಗಳೆಲ್ಲವೂ ವಲಸೆ ಕಾರ್ಮಿಕರ ಸಮಸ್ಯೆ ಮತ್ತು ಆಹಾರ ಸಮಸ್ಯೆಗೆ ಸಂಬಂಧಿಸಿದವು.

ಕೋವಿಡ್- 19 ಭೀತಿಯಿಂದಾಗಿ ಮಾ. 23ರಿಂದ ಇಡೀ ಭಾರತವೇ ಲಾಕ್‌ಡೌನ್‌ ಆಗಿದೆ. ಕಳೆದೊಂದು ತಿಂಗಳಿನಿಂದ ಇಲ್ಲಿವರೆಗೆ ಲಾಕ್‌ಡೌನ್‌ ಪರಿಣಾಮವಾಗಿ ಕೆಲಸವಿಲ್ಲದೆ, ಸೇವಿಸಲು ಸರಿಯಾದ ಆಹಾರ ವ್ಯವಸ್ಥೆ ಇಲ್ಲದೆ ಹಲವಾರು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ. ಅದರಲ್ಲೂ ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದಿಂದ ಬಂದ ವಲಸೆ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಸಂಕಷ್ಟಕ್ಕೊಳಗಾಗಿದ್ದರು. ಹೆಚ್ಚಿನವರಿಗೆ ಜಿಲ್ಲಾಡಳಿತ, ವಿವಿಧ ಸಂಘ-ಸಂಸ್ಥೆಗಳ ಮುಖಾಂತರ ಆಹಾರ ವ್ಯವಸ್ಥೆ ಮಾಡಿದ್ದರೆ, ಕೆಲವರು ಆಹಾರ ಸಿಗದೇ ಪರದಾಟ ನಡೆಸಿದ್ದಾರೆ. ಅಂತಹವರ ಪೈಕಿ ಸುಮಾರು 50ಕ್ಕೂ ಹೆಚ್ಚು ಮಂದಿ ವಲಸೆ ಕಾರ್ಮಿಕರು ಮತ್ತು ಆಹಾರಕ್ಕೆ ಸಮಸ್ಯೆ ಇರುವವರು ಚೈಲ್ಡ್‌ಲೈನ್‌ ಸಂಖ್ಯೆ 1098ಕ್ಕೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡಿದ್ದಾರೆ. ಆ ಮೂಲಕ ಮಕ್ಕಳ ಸಮಸ್ಯೆ ಪರಿಹಾರಕ್ಕಿರುವ ಚೈಲ್ಡ್‌ಲೈನ್‌ ಈ ಒಂದು ತಿಂಗಳ ಅವಧಿಯಲ್ಲಿ ಕಾರ್ಮಿಕರ ಸಮಸ್ಯೆಗಳನ್ನೂ ಆಲಿಸುವ ಕೆಲಸ ಮಾಡಿದೆ.

ಇಲಾಖೆಗೆ ತಿಳಿಸುವ ಕೆಲಸ
ಚೈಲ್ಡ್‌ಲೈನ್‌ಗೆ ಬಂದ ಕರೆಗಳು ನಮಗೆ ಸಂಬಂಧಪಟ್ಟವಲ್ಲ ಎಂದು ಸುಮ್ಮನಾಗದ ಚೈಲ್ಡ್‌ಲೈನ್‌ ಸಿಬಂದಿ ಕಾರ್ಮಿಕರು ಮತ್ತು ಸಂಕಷ್ಟದಲ್ಲಿರುವವರ ಎಲ್ಲ ಸಮಸ್ಯೆಗಳನ್ನು ಆಲಿಸಿ, ಅವರ ಮಾಹಿತಿ ಪಡೆದುಕೊಂಡು ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.

ಮಕ್ಕಳ ಸಮಸ್ಯೆಗೆ ಶೂನ್ಯ ಕರೆ
ಮಕ್ಕಳಿಗೆ ಸಂಬಂಧಪಟ್ಟಂತಹ ಯಾವುದೇ ಕರೆಗಳು ಲಾಕ್‌ಡೌನ್‌ ಅವಧಿಯಲ್ಲಿ ಚೈಲ್ಡ್‌ಲೈನ್‌ಗೆ ಬಂದಿಲ್ಲ. ಬೇರೆ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳ ಕಳ್ಳಸಾಗಾಣಿಕೆ, ಮಕ್ಕಳ ಭಿಕ್ಷಾಟನೆಗೆ ಸಂಬಂಧಿಸಿದ ಕರೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದವು ಎನ್ನುತ್ತಾರೆ ಚೈಲ್ಡ್‌ಲೈನ್‌ ಸಿಬಂದಿ.

24 ಗಂಟೆ ಕೆಲಸ
18 ವರ್ಷ ಪ್ರಾಯದೊಳಗಿನ ಮಕ್ಕಳ ಮೇಲೆ ದೈಹಿಕ ಹಾಗೂ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ, ಶೋಷಣೆಗಳು ಹಾಗೂ ಆಹಾರ, ವಸತಿ ಮತ್ತಿತರ ಮೂಲ ಆವಶ್ಯಕತೆಗಳಿಂದ ವಂಚಿತವಾದ ಮಕ್ಕಳು ಕಂಡುಬಂದರೆ, ಸಾರ್ವಜನಿಕರು ಉಚಿತ ಕರೆ ದೂರವಾಣಿ ಸಂಖ್ಯೆ 1098 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡಲು ಅವಕಾಶವಿದೆ. ಚೈಲ್ಡ್‌ಲೈನ್‌ ದಿನದ 24 ಗಂಟೆಗಳೂ ಕೆಲಸ ನಿರ್ವಹಿಸುತ್ತಿದೆ.

 ಸಂಬಂಧಪಟ್ಟವರಿಗೆ ಹಸ್ತಾಂತರ
ಲಾಕ್‌ಡೌನ್‌ ಅವಧಿಯಲ್ಲಿ ಚೈಲ್ಡ್‌ಲೈನ್‌ಗೆ ಮಕ್ಕಳ ದೌರ್ಜನ್ಯ, ಭಿಕ್ಷಾಟನೆ, ಕಳ್ಳ ಸಾಗಾಟ ಸಂಬಂಧಿಸಿದ ಯಾವುದೇ ಕರೆಗಳು ಬಂದಿಲ್ಲ. ಆದರೆ, ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ಮತ್ತು ಆಹಾರ ಸಮಸ್ಯೆ ಸಂಬಂಧಿಸಿದಂತೆ ಹೆಚ್ಚು ಕರೆಗಳು ಬಂದಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಈ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಾಗಿದೆ.
 - ಲವಿತಾ ಡಿ’ಸೋಜಾ
ಕೋ-ಆರ್ಡಿನೇಟರ್‌, ಚೈಲ್ಡ್‌ಲೈನ್‌

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.