ದಾಂಡೇಲಿ ಸಿವಿಲ್ ನ್ಯಾಯಾಲಯದಲ್ಲಿ ಮೆಗಾ ಲೋಕ್ ಅದಾಲತ್ ಗೆ ಚಾಲನೆ
Team Udayavani, Aug 14, 2021, 2:54 PM IST
ದಾಂಡೇಲಿ : ನಗರದ ಸಿವಿಲ್ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮಕ್ಕೆ ಶನಿವಾರ ಬೆಳಿಗ್ಗೆ ಚಾಲನೆಯನ್ನು ನೀಡಲಾಯಿತು.
ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣಕುಮಾರ್.ಆರ್.ಜೆ.ಎಸ್ ಅವರು ಲೋಕ್ ಅದಾಲತಿಗೆ ಚಾಲನೆಯನ್ನು ನೀಡಿ ಇಂದು ರಾಜ್ಯಾದಾದ್ಯಂತ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಬಾಕಿಯಿರುವ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಹಾಗೂ ಸರಕಾರಿ ಮತ್ತು ಖಾಸಗಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದಂತೆ ಇರುವಂತಹ ಪ್ರಕರಣಗಳನ್ನು ಇತ್ಯರ್ಥ್ಯಪಡಿಸಲು ಲೋಕ್ ಅದಾಲತ್ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಸರಕಾರಿ ಅಭಿಯೋಜಕರಾದ ಹುಸೇನಸಾಬ ನದಾಫ್ ಹಾಗೂ ಸಂಧಾನಕಾರರಾಗಿ ನ್ಯಾಯವಾದಿ ಮಮ್ತಾಜ್ ಶೇಖ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲೋಕ್ ಅದಾಲತ್ ಯಶಸ್ಸಿಗಾಗಿ ನಗರದ ವಕೀಲರುಗಳು, ಸಿವಿಲ್ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸರು ಸಹಕರಿಸುತ್ತಿದ್ದಾರೆ. ರಾಜಿ ಸಂಧಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಜನರು ಲೋಕ್ ಅದಾಲತ್ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಲು ಆಗಮಿಸಿರುವುದು ವಿಶೇಷವಾಗಿತ್ತು.
ಇದನ್ನೂ ಓದಿ :ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ
ಈ ಸಂದರ್ಭದಲ್ಲಿ ನಗರದ ವಕೀಲರ ಸಂಘದ ಅಧ್ಯಕ್ಷ ವಿ.ಆರ್.ಹೆಗಡೆ, ಕಾರ್ಯದರ್ಶಿ ವಿಶ್ವನಾಥ ಲಕ್ಷ್ಯಟ್ಟಿ, ವಕೀಲರುಗಳಾದ ಎಂ.ಸಿ.ಹೆಗಡೆ, ಎಚ್.ಎಸ್.ಕುಲಕರ್ಣಿ, ಎಸ್.ಎಂ.ದಬಗಾರ, ಎಸ್.ಸೋಮಕುಮಾರ್, ವಿಶ್ವನಾಥ ಜಾಧವ, ಐ.ಸಿ.ನಾಯ್ಕ, ಸುನೀಲ ದೇಸಾಯಿ, ಫೀರ್ ಸಾಬ ನದಾಫ್, ಎಂ.ಎ.ಶೇಖ, ಅನಿತಾ ಸೋಮಕುಮಾರ್, ಶೈಲಾ ನಾಮಧಾರಿ, ಕವಿತಾ ಗಡೆಪ್ಪನವರ, ಸುಮಿತ್ರಾ.ಕೆ, ರೂಪಾ ಕೇರವಾಡಕರ, ರತ್ನಾದೀಪ, ಅಕ್ಷಯ್ ಘಟಕಾಂಬಳೆ, ನಾಗರಾಜ ಮೊದಲಾದವರು ಹಾಗೂ ನಗರದ ವಿವಿಧ ಸರಕಾರಿ, ಖಾಸಗಿ ಬ್ಯಾಂಕ್, ಸಹಕಾರಿ ಸಂಘಗಳ ವ್ಯವಸ್ಥಾಪಕರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.