Lok Sabha Elections; ಕಾಂಗ್ರೆಸ್‌ ಎರಡನೇ ಪಟ್ಟಿ ನಾಳೆ ಅಂತಿಮ?

ಸುರ್ಜೇವಾಲ ಆಗಮನ, ಸಿಎಂ, ಡಿಸಿಎಂ ಜತೆ ಮಹತ್ವದ ಸಭೆ -ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌

Team Udayavani, Mar 10, 2024, 7:30 AM IST

Lok Sabha Elections; ಸೋಮವಾರ ಕಾಂಗ್ರೆಸ್‌ ಎರಡನೇ ಪಟ್ಟಿ ಅಂತಿಮ?

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೂ 21 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿಸಿಕೊಂಡಿರುವ ಆಡಳಿತಾರೂಢ ಕಾಂಗ್ರೆಸ್‌ ಬಾಕಿ ಪಟ್ಟಿ ಬಿಡುಗಡೆಗೆ ಜಾಣ ನಡೆ ಅನುಸರಿಸುತ್ತಿದೆ. ಈ ಮಧ್ಯೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಬಿಡಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು ಮತ್ತೊಂದು ಸುತ್ತು ಸಿಎಂ, ಡಿಸಿಎಂ ಜತೆ ಸಮಾಲೋಚಿಸಿದ ಬಳಿಕ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ಈಗಾಗಲೇ 7 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಿರೀಕ್ಷಿಸುತ್ತಿರುವುದು ಒಂದೆಡೆಯಾದರೆ, ಹಲವು ಕ್ಷೇತ್ರಗಳಿಗೆ ಇನ್ನು ಸಮರ್ಥ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದವರಲ್ಲಿ ಕೊನೇ ಕ್ಷಣದಲ್ಲಿ ಏನಾದರೂ ಬದಲಾವಣೆಯಾದರೆ ಟಿಕೆಟ್‌ ಕೈತಪ್ಪಬಹುದೇ ಎಂಬ ಆತಂಕ ಶುರುವಾಗಿದೆ.

ಇವೆಲ್ಲದರ ಮಧ್ಯೆ ಕೆಲವು ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ ಒಮ್ಮತ ಮೂಡದಿರುವುದು ಮತ್ತೊಂದು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಗೂ ಮುನ್ನ ಬಿಕ್ಕಟ್ಟು-ಕಗ್ಗಂಟು ಇತ್ಯರ್ಥಕ್ಕೆ ಸುರ್ಜೇವಾಲ ಆಗಮಿಸುತ್ತಿದ್ದಾರೆ.

ಸೋಮವಾರದ ತ್ರಿಮೂರ್ತಿಗಳ ಸಭೆಯಲ್ಲಿ ಒಂದಷ್ಟು ಕ್ಷೇತ್ರಗಳ ಬಗ್ಗೆ ಒಮ್ಮತ ಮೂಡಿದರೆ ಆ ಹೆಸರುಗಳನ್ನು ಸಿಇಸಿ ಅಂತಿಮವಾಗಿ ಅನುಮೋದನೆ ನೀಡಲಿದೆ. ಆ ಬಳಿಕ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಸಚಿವದ್ವಯರಿಗೆ ಒತ್ತಡ:
ಅಭ್ಯರ್ಥಿಗಳ ಕೊರತೆ ನೀಗಿಸುವ ಸಲುವಾಗಿ ಕೋಲಾರದಿಂದ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ ಚಾಮರಾಜನಗರದಿಂದ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಣಕ್ಕಿಳಿಯಬೇಕೆಂಬ ಒತ್ತಡ ದಿನೇದಿನೆ ಹೆಚ್ಚಾಗುತ್ತಿದೆ. ಆದರೆ ಈ ಇಬ್ಬರು ಸಚಿವರು ತಮ್ಮ ಬದಲಿಗೆ ಕ್ರಮವಾಗಿ ತಮ್ಮ ಪುತ್ರಿ ಹಾಗೂ ಪುತ್ರನಿಗೆ ಟಿಕೆಟ್‌ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ. ಆದರೆ ಹೈಕಮಾಂಡ್‌ ಆಗಲಿ ರಾಜ್ಯದ ನಾಯಕರಾಗಲಿ ಈ ಬೇಡಿಕೆಗೆ ಸುತಾರಂ ಒಪ್ಪಿಗೆ ನೀಡಿಲ್ಲ. ವಿಶೇಷವಾಗಿ ಮಹದೇವಪ್ಪ ಅವರು ತಮ್ಮ ಬದಲಿಗೆ ಪುತ್ರ ಸುನಿಲ್‌ ಬೋಸ್‌ಗೆ ಚಾಮರಾಜನಗರದಿಂದ ಟಿಕೆಟ್‌ ಕೊಡಬೇಕೆಂದು ಬಲವಾಗಿ ಪಟ್ಟು ಹಿಡಿದಿದ್ದಾರೆ. ಆದರೆ ಸಚಿವರೇ ಸ್ಪರ್ಧಿಸಿದರೆ ಮಾತ್ರ ಗೆಲುವು ಗ್ಯಾರಂಟಿ ಎಂಬುದು ಪಕ್ಷ ನಡೆಸಿದ ಹಲವು ಸಮೀಕ್ಷೆಗಳಿಂದ ವ್ಯಕ್ತವಾಗಿರುವುದರಿಂದ ಸಚಿವರ ಸ್ಪರ್ಧೆಗೆ ಒತ್ತಡ ಹೆಚ್ಚಿದೆ.

ಕೆಎಚ್‌ಎಂಗೆ ವಿರೋಧ
ಈ ಮಧ್ಯೆ ಸಚಿವ ಮುನಿಯಪ್ಪ ಅವರಿಗಾಗಲಿ ಅಥವಾ ಅವರ ಕುಟುಂಬದ ಯಾವುದೇ ಸದಸ್ಯರಿಗಾಗಲಿ ಲೋಕಸಭಾ ಚುನಾವಣೆಯ ಟಿಕೆಟ್‌ ಕೊಡಬಾರದೆಂದು ಕೋಲಾರ ಜಿಲ್ಲೆಯ ಕಾಂಗ್ರೆಸ್‌ ಶಾಸಕರು ಹಾಗೂ ಮಾಜಿ ಶಾಸಕರು, ಮಾಜಿ ಸಚಿವರು ಪಟ್ಟು ಹಿಡಿದಿರುವುದರಿಂದ ಕಾಂಗ್ರೆಸ್‌ ಪಕ್ಷ ಈಗ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿದೆ. ಯಾವುದೇ ತೀರ್ಮಾನ ಕೈಗೊಂಡರೂ ಪಕ್ಷಕ್ಕೆ ಹಾನಿ ತಪ್ಪಿದ್ದಲ್ಲ ಎಂಬ ಆತಂಕ ಶುರುವಾಗಿದೆ.

ಎಸ್‌ಟಿಎಸ್‌, ಹೆಬ್ಬಾರ್‌ ಸ್ಟಾಂಡ್‌ಬೈ ಅಭ್ಯರ್ಥಿಗಳು
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಬಿಜೆಪಿಯ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಹಾಗೂ ಮತದಾನಕ್ಕೆ ಗೈರು ಹಾಜರಾದ ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಅವರು ಕಾಂಗೆಸ್‌ನ ಸ್ಟಾಂಡ್‌ಬೈ ಅಭ್ಯರ್ಥಿಗಳಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಂತ ಜಿಲ್ಲೆ ಮೈಸೂರು ಅಭ್ಯರ್ಥಿ ಬಗ್ಗೆ ಇನ್ನೂ ಸಾಕಷ್ಟು ಗೊಂದಲಗಳಿವೆ, ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೂಡಿರುವ ಅನಿಶ್ಚಿತತೆ ಇನ್ನೂ ನಿವಾರಣೆಯಾಗಿಲ್ಲ. ಸಿಎಂ ಪುತ್ರ ಡಾ. ಯತೀಂದ್ರ ಅವರನ್ನು ಕಣಕ್ಕಿಳಿಸಬೇಕೆಂದು ಕಾಂಗ್ರೆಸ್‌ ಹೈಕಮಾಂಡ್‌ ಒತ್ತಡ ಹೇರುತ್ತಿದ್ದರೂ ಸಿಎಂ ಸಮ್ಮತಿ ನೀಡಿಲ್ಲ. ಮೈಸೂರಿನ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಮೇಲೆ ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ. ಅದೇ ರೀತಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್‌ ಅಭ್ಯರ್ಥಿ ಕೊರತೆ ಎದುರಿಸುತ್ತಿದೆ. ಹೀಗಾಗಿ ಎಸ್‌.ಟಿ.ಸೋಮಶೇಖರ್‌ ಕೊನೇ ಗಳಿಗೆಯಲ್ಲಿ ಮೈಸೂರು ಇಲ್ಲವೇ ಬೆಂಗಳೂರು ಉತ್ತರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಅಚ್ಚರಿ ಇಲ್ಲ.

ಇನ್ನೊಂದೆಡೆ ಉತ್ತರ ಕನ್ನಡ ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿತನದ ಕೊರತೆ ಎದುರಿಸುತ್ತಿದೆ. ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌, ರವೀಂದ್ರ ನಾಯ್ಕ ಜತೆಗೆ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಹೆಸರು ಚಲಾವಣೆಯಲ್ಲಿದೆ. ಸೂಕ್ತ ಅಭ್ಯರ್ಥಿ ಸಿಗದಿದ್ದರೆ ಬಿಜೆಪಿಗೆ ರಾಜೀನಾಮೆ ಕೊಡಿಸಿ ಹೆಬ್ಬಾರ್‌ ಅವರನ್ನೇ ಅಭ್ಯರ್ಥಿಯಾಗಿ ಮಾಡಬಹುದೆಂಬ ಲೆಕ್ಕಾಚಾರಗಳು ನಡೆದಿವೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.