Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

ಮೊದಲ ಹಂತದಲ್ಲಿ 247, 2ನೇ ಹಂತದಲ್ಲಿ 227 ಉಮೇದುವಾರರು

Team Udayavani, Apr 23, 2024, 7:05 AM IST

Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

ಬೆಂಗಳೂರು: ಎರಡು ಹಂತಗಳಲ್ಲಿ ಮತದಾನ ನಡೆಯಲಿರುವ ರಾಜ್ಯದ 28 ಕ್ಷೇತ್ರಗಳ ಅಖಾಡ ಅಂತಿಮ ಗೊಂಡಿದೆ. 474 ಕಲಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಮೊದಲ ಹಂತದಲ್ಲಿ ಎ. 26ರಂದು ಮತದಾನ ನಡೆಯಲಿರುವ 14 ಸ್ಥಾನ ಗಳಿಗೆ 247 ಸ್ಪರ್ಧಿಗಳು ಕಣದಲ್ಲಿದ್ದರೆ, ಮೇ 7ರಂದು ನಡೆಯಲಿರುವ 2ನೇ ಹಂತದಲ್ಲಿ 14 ಸ್ಥಾನಗಳಿಗೆ 227 ಅಭ್ಯರ್ಥಿಗಳು ಸೇರಿ ಒಟ್ಟು 28 ಸ್ಥಾನಗಳಿಗೆ 474 ಹುರಿಯಾಳುಗಳು ಸ್ಪರ್ಧಾಕಣದಲ್ಲಿ ಇದ್ದಾರೆ. ಈ ಪೈಕಿ ಒಟ್ಟು 432 ಪುರುಷರು, 42 ಮಹಿಳಾ ಅಭ್ಯರ್ಥಿಗಳು. ದಾವಣಗೆರೆಯಲ್ಲಿ ಗರಿಷ್ಠ 30 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಹಂತ 1: ಪ್ರಚಾರ ತಾರಕಕ್ಕೆ
ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ14 ಲೋಕಸಭಾ ಕೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇನ್ನೆರಡು ದಿನಗಳಲ್ಲಿ ತೆರೆ ಬೀಳಲಿದೆ. ಹೀಗಾಗಿ ಪ್ರಚಾರ ತಾರಕಕ್ಕೆ ಏರಲಿದೆ. ಎ. 26 ರಂದು ರಾಜ್ಯದಲ್ಲಿ ಮತದಾನ ನಡೆಯಲಿರುವುದರಿಂದ ಗುರು ವಾರ ಒಂದು ದಿನ ಅಭ್ಯರ್ಥಿಗಳಿಗೆ ಮನೆ-ಮನೆ ಪ್ರಚಾರಕ್ಕೆ ಅವಕಾಶ ಸಿಗಲಿದೆ.

ಚುನಾವಣೆ ಘೋಷಣೆಯಾದ ಬಳಿಕ ಪಕ್ಷಗಳು ಹಲವು ದಿನ ಅಭ್ಯರ್ಥಿಗಳ ಆಯ್ಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದವು. ಅಭ್ಯರ್ಥಿಗಳ ಆಯ್ಕೆ, ಟಿಕೆಟ್‌ ವಂಚಿತರನ್ನು ಸಮಾಧಾನಪಡಿಸುವ ಕಾಯಕಕ್ಕೆ ಹೆಚ್ಚು ಸಮಯ ಬೇಕಾದ್ದರಿಂದ ಅಭ್ಯರ್ಥಿ ಗಳು, ಪ್ರಮುಖ ನಾಯಕರು ಪ್ರಚಾರ ಕಣಕ್ಕೆ ಧುಮುಕಿದ್ದೇ ತಡ ವಾಗಿ. ಅಲ್ಪ ಕಾಲದಲ್ಲಿ ಮತದಾರರ ಮನವೊಲಿಸುವ ಸವಾಲು ಇದ್ದುದ ರಿಂದ ಕೊನೆಯ ಘಳಿಗೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವಂತಾಗಿದೆ.

ಪ್ರಚಾರದಲ್ಲಿ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಪರವಾಗಿ ಚುನಾವಣೆ ಘೋಷಣೆಯಾದ ದಿನವೇ ಪ್ರಧಾನಿ ಮೋದಿ ಪ್ರಚಾರಕ್ಕಿಳಿದರು. ಕಲಬುರಗಿ, ಶಿವಮೊಗ್ಗದಲ್ಲಿ ಒಂದು ಸುತ್ತಿನ ಪ್ರಚಾರ ನಡೆಸಿದ್ದ ಮೋದಿ, ಅನಂತರ ಮೈಸೂರು ಹಾಗೂ ಮಂಗಳೂರು ಮತ್ತು ಮೂರನೇ ಸುತ್ತಿನಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಪ್ರಚಾರ ನಡೆಸಿದರು. ಎಚ್‌.ಡಿ. ದೇವೇಗೌಡರೊಂದಿಗೆ ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ವೇದಿಕೆ ಹಂಚಿಕೊಂಡದ್ದು ವಿಶೇಷವೆನಿಸಿತ್ತು. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಂದು ಸುತ್ತಿನಲ್ಲಿ ಪ್ರಚಾರ ನಡೆಸಿದ್ದರೆ, ಬುಧವಾರ ಮತ್ತೂಂದು ಸುತ್ತಿನ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿ ದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್‌ ಕೂಡ ಬಿಜೆಪಿ ಪರ ಕೊನೆ ಹಂತದಲ್ಲಿ ಪ್ರಚಾರ ನಡೆಸಲಿದ್ದಾರೆ.

ರಾಹುಲ್‌, ಪ್ರಿಯಾಂಕಾ ಪ್ರಚಾರ
ಮೈಸೂರು, ಚಾಮರಾಜನಗರ ಕ್ಷೇತ್ರಗಳ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಿ ಪ್ರಚಾರ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಕೊನೆಯ ಅವಧಿಯಲ್ಲಿ ಬೇರೆ ಬೇರೆ ಕ್ಷೇತ್ರಗಳಿಗೂ ಸಮಯ ಕೊಟ್ಟರು. ಇನ್ನು ಡಿ.ಕೆ. ಶಿವಕುಮಾರ್‌ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಹೆಚ್ಚು ನಿಗಾ ಇಟ್ಟು ಪ್ರಚಾರ ಕೈಗೊಂಡಿದ್ದರು. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎರಡು ಸುತ್ತಿನ ಪ್ರಚಾರವನ್ನಷ್ಟೇ ನಡೆಸಿದ್ದು, ಇತ್ತೀಚೆಗೆ ರಾಹುಲ್‌ ಗಾಂಧಿ ಮಂಡ್ಯ ಮತ್ತು ಕೋಲಾರದಲ್ಲಿ ಪ್ರಚಾರ ಮಾಡಿದರು. ಈಗ ಪ್ರಿಯಾಂಕಾ ಗಾಂಧಿ ಕೂಡ ಒಂದು ಸುತ್ತಿನ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಬರಲಿದ್ದಾರೆ.

ಮಗ್ಗಲು ಬದಲಿಸಿದ ಪ್ರಚಾರ ತಂತ್ರಗಳು
ಆರಂಭದಲ್ಲಿ ನೀರಸವೆನಿಸಿದ್ದ ಪ್ರಚಾರದ ತಂತ್ರಗಳು ಮತದಾನದ ದಿನ ಸಮೀಪಿಸುತ್ತಿದ್ದಂತೆ ರಂಗು ಪಡೆಯ ಲಾರಂಭಿಸಿದೆ. ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವ ಭರದಲ್ಲಿ ಭಾಷೆ ಬಳಕೆ ಕೂಡ ಅನರ್ಥಗಳಿಗೆ ಎಡೆ ಮಾಡಿಕೊಟ್ಟಿದೆ. ಗ್ಯಾರಂಟಿ ಮತ್ತು ಬೆಲೆಯೇರಿಕೆ ವಿಚಾರವನ್ನು ಸಮೀಕರಿಸಿ ಮತದಾರರಿಗೆ ಅರ್ಥ ಮಾಡಿಸಲು ಯತ್ನಿಸಿದ ಬಿಜೆಪಿ ಒಂದೆಡೆಯಾದರೆ, ಗ್ಯಾರಂಟಿಯ ಸತ್ಪರಿಣಾಮಗಳು, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಇತ್ಯಾದಿ ಅಂಶಗಳನ್ನು ಇಟ್ಟುಕೊಂಡು ಕಾಂಗ್ರೆಸ್‌ ಪ್ರಚಾರ ಮಾಡುತ್ತಿತ್ತು. ಅನಂತರ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ನಿಲ್ಲುತ್ತದೆ ಎಂದು ಬಿಜೆಪಿ ಆರೋಪಿಸಿದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ ಎಂದು ಕಾಂಗ್ರೆಸ್‌ ಸಮರ್ಥಿಸಿಕೊಂ ಡಿತ್ತು. ಈಗ ಚೊಂಬು, ಡೇಂಜರ್‌ ಜಾಹೀರಾತು, ಕಾನೂನು ಸುವ್ಯವಸ್ಥೆ ವಿಚಾರಗಳು ಪ್ರಚಾರದ ಪ್ರಮುಖ ಅಸ್ತ್ರಗಳಾಗಿವೆ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.