Lokayukta: ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ| ಪಾಟೀಲ್ ಭೇಟಿ
Team Udayavani, Aug 11, 2023, 11:06 PM IST
ಚಿತ್ರದುರ್ಗ: ರಾಜ್ಯ ಲೋಕಾಯುಕ್ತ ನ್ಯಾ| ಬಿ.ಎಸ್. ಪಾಟೀಲ್ ಅವರು ಕಲುಷಿತ ನೀರು ಸೇವಿಸಿ ಕೆಲವರು ಮೃತಪಟ್ಟ ನಗರದ ಕವಾಡಿಗರಹಟ್ಟಿಗೆ ಶುಕ್ರವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.
ಕವಾಡಿಗರಹಟ್ಟಿಗೆ ನೀರು ಪೂರೈ ಸುವ ಓವರ್ ಹೆಡ್ ಟ್ಯಾಂಕ್ ಬಳಿಗೆ ತೆರಳಿ ಪರಿಶೀಲಿಸಿದರು. ಅನಂತರ ಅಂಗನವಾಡಿಯಲ್ಲಿ ತಾತ್ಕಾಲಿಕವಾಗಿ ತೆರೆದಿರುವ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದರು. ಲೋಕಾಯುಕ್ತರ ಭೇಟಿ ವೇಳೆ ಇಬ್ಬರು ಶುಶ್ರೂಷಕರು ಮಾತ್ರ ಕರ್ತವ್ಯದಲ್ಲಿದ್ದರು. ವೈದ್ಯರು ಹಾಜರಿರಲಿಲ್ಲ. ಇದಕ್ಕೆ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದರು.
ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಮಹಿಳೆ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮನೆಯಲ್ಲಿ ಶೌಚಾಲಯ ಇಲ್ಲದ್ದನ್ನು ಗಮನಿಸಿದ ಲೋಕಾಯುಕ್ತರು, ಸರಕಾರದ ಯೋಜನೆಯಡಿ ಈ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿ ಕೊಡಲು ಕೂಡಲೇ ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.
ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣದಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗಾಗಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದು, ಅಗತ್ಯ ಔಷಧ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪೌರಾಯುಕ್ತರಿಗೆ ತರಾಟೆ
ಬೆಳಗ್ಗೆ 7.30ಕ್ಕೆ ನಗರಕ್ಕೆ ಆಗಮಿಸಿ ಮೆದೇಹಳ್ಳಿ ರಸ್ತೆ, ಬಿ.ಡಿ. ರಸ್ತೆ, ಜೆಸಿಆರ್, ಹೊರಪೇಟೆ, ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿ ಲೋಕಾಯುಕ್ತರು ಸಂಚಾರ ನಡೆಸಿದರು. ಈ ವೇಳೆ ರಸ್ತೆ ಬದಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದು, ಖಾಲಿ ನಿವೇಶನದಲ್ಲಿ ಕಸದ ರಾಶಿ ಕಂಡು ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.