Lokayukta Raids; ಬೈಂದೂರು ಉಪವಲಯ ಅರಣ್ಯಾಧಿಕಾರಿ ಬಂಧನ
Team Udayavani, Jun 21, 2024, 10:46 PM IST
ಬೈಂದೂರು: ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಪರವಾನಿಗೆಗೆ ಲಂಚದ ಬೇಡಿಕೆಯಿಟ್ಟ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಅರಣ್ಯ ವೀಕ್ಷಕ ವಿನಾಯಕ ತಪ್ಪಿಸಿಕೊಂಡಿದ್ದಾರೆ.
ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಅವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಅನುಮತಿ ನೀಡುವ ಬಗ್ಗೆ ಆರೋಪಿಗಳಿಗೆ ಅರ್ಜಿ ನೀಡಿದ್ದರು.
ಪರವಾನಿಗೆ ನೀಡಲು 4 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಮ್ಮದ್ ಅನ್ವರ್ ಹಸನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಸಮೇತ ಬಂಗಾರಪ್ಪನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.