ನಾಳೆ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ
28 ಕ್ಷೇತ್ರಗಳಲ್ಲಿ 461 ಅಭ್ಯರ್ಥಿಗಳ ಹಣೆಬರಹ ನಿರ್ಧಾರ
Team Udayavani, May 22, 2019, 6:00 AM IST
ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 3.50 ಕೋಟಿ ಮತದಾರರು ಬರೆದ 461 ಅಭ್ಯರ್ಥಿಗಳ ಹಣೆಬರಹ ಗುರುವಾರ ಬಹಿರಂಗವಾಗಲಿದೆ. ಮತ ಎಣಿಕೆಗೆ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದರಂತೆ ರಾಜ್ಯಾದ್ಯಂತ 28 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಮೇ 23ರ ಬೆಳಗ್ಗೆ 8 ಗಂಟೆಯಿಂದ ಏಕಕಾಲದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ಮತ ಎಣಿಕೆ ಸಿದ್ಧತೆಗಳ ಕುರಿತು ಮಾಹಿತಿ ನೀಡಲು ಮಂಗಳವಾರ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಈ ಬಗ್ಗೆ ಮಾಹಿತಿ ನೀಡಿದರು. ಅವರು ಹೇಳಿದ್ದಿಷ್ಟು:
•ಎಲ್ಲ 28 ಲೋಕಸಭಾ ಕ್ಷೇತ್ರಗಳ 58,186 ಮತಗಟ್ಟೆಗಳ ಮತ ಎಣಿಕೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 14 ಟೇಬಲ್ಗಳಂತೆ 3,224 ಮತ ಎಣಿಕೆ ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ವಿವಿಪ್ಯಾಟ್ ಮುದ್ರಿತ ಚೀಟಿಗಳ ತಾಳೆ ಸುತ್ತು ಸೇರಿ ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 18ರಿಂದ ಗರಿಷ್ಠ 33 ಸುತ್ತುಗಳಂತೆ ಒಟ್ಟು 4,215 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಒಂದು ಸುತ್ತು ಪೂರ್ಣಗೊಳಿಸಲು ಕನಿಷ್ಠ 15ರಿಂದ 20 ನಿಮಿಷ ಆಗುತ್ತದೆ. ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭಗೊಳ್ಳಲಿದ್ದು, ಮೊದಲಿಗೆ ಪೋಸ್ಟಲ್ ಬ್ಯಾಲೆಟ್ ಹಾಗೂ ಸೇವಾ ಮತದಾರರ ಇಟಿಪಿಬಿಎಸ್ ಮತಗಳ ಎಣಿಕೆ ನಡೆಯಲಿದೆ. 25,768 ಇಟಿಪಿಬಿಎಸ್ ಮತಗಳು ಸೇರಿ ಒಟ್ಟು 98,606 ಪೋಸ್ಟಲ್ ಬ್ಯಾಲೆಟ್‌ಗಳು ಇಲ್ಲಿವರೆಗೆ ಸ್ವೀಕೃತವಾಗಿವೆ.
•ಮತ ಎಣಿಕೆ ಕಾರ್ಯಕ್ಕಾಗಿ 28 ಕ್ಷೇತ್ರಗಳಲ್ಲಿ 28 ಚುನಾವಣಾಧಿಕಾರಿಗಳು, 258 ಸಹಾಯಕ ಚುನಾವಣಾಧಿಕಾರಿಗಳು, 180 ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳು, 80 ವೀಕ್ಷಕರನ್ನು ನಿಯೋಜಿಸಲಾಗಿದೆ. ಇದಲ್ಲದೇ 3,682 ಮೇಲುಸ್ತುವಾರಿ, 3,707 ಸಹಾಯಕರು, 3,738 ಸೂಕ್ಷ್ಮವೀಕ್ಷಕರು ಕಾರ್ಯ ನಿರ್ವಹಿ ಸಲಿದ್ದಾರೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
•ಮತ ಎಣಿಕೆ ಕೇಂದ್ರದೊಳಗೆ ಮತ ಎಣಿಕೆಯ ಮೇಲುಸ್ತುವಾರಿ, ಎಣಿಕೆಯ ಸಹಾಯಕರು ಮತ್ತು ಸೂಕ್ಷ್ಮ ವೀಕ್ಷಕರು ಮತ್ತು ಚುನಾವಣಾ ಆಯೋಗದಿಂದ ಮಾನ್ಯತೆ ಪತ್ರ ಪಡೆದುಕೊಂಡ ಸಿಬ್ಬಂದಿ, ಅಭ್ಯರ್ಥಿಗಳು, ಅವರ ಏಜೆಂಟರುಗಳ ಪ್ರವೇಶಕ್ಕೆ ಅವಕಾಶ ಇದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ನಿಷಿದ್ಧ.
•ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಾಲ್ಕು ಹಂತದಲ್ಲಿ ಭದ್ರತೆ ಮಾಡಲಾಗಿದೆ. ಕೇಂದ್ರ ಕ್ಷಿಪ್ರ ಕಾರ್ಯ ಪಡೆ, ಶಸ್ತ್ರಾಸ್ತ್ರ ಮೀಸಲು ಪಡೆ, ಸಿವಿಲ್ ಪೊಲೀಸ್, ಕೆಎಸ್‌ಆರ್‌ಪಿ ಪೊಲೀಸರನ್ನು ವಿವಿಧ ಹಂತದಲ್ಲಿ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರಿಗೆ ಮತ ಎಣಿಕೆ ಕೇಂದ್ರದಿಂದ 50 ಮೀಟರ್‌ನಿಂದ 100 ಮೀಟರ್ ದೂರದವರೆಗೆ ನಿಷೇಧ ಇದೆ. ಫಲಿತಾಂಶ ವೀಕ್ಷಣೆಗಾಗಿ ಎಲ್ಇಡಿ ವ್ಯವಸ್ಥೆ ಮಾಡಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.