ಸಾಂಸ್ಕೃತಿಕ ಲೋಕದಲ್ಲಿ ಛಾಪು; ಬಲಿಪ ಭಾಗವತರ ನಿಧನಕ್ಕೆ ಪ್ರಧಾನಿ ಸಂತಾಪ
Team Udayavani, Feb 17, 2023, 3:24 PM IST
ನವದೆಹಲಿ : ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
”ಶ್ರೀ ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.” ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
Shri Balipa Narayana Bhagawatha made a mark in the world of culture. He devoted his life towards Yakshagana playback singing and was admired for his exemplary style. His works will be admired by the coming generations. Pained by his demise. Condolences to his family. Om Shanti.
— Narendra Modi (@narendramodi) February 17, 2023
ಸಿಎಂ ಬೊಮ್ಮಾಯಿ ಸಾಂತಾಪ
”ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಕಂಚಿನ ಕಂಠದ ಬಲಿಪ ಶೈಲಿಯ ಹಾಡುಗಾರಿಕೆಗೆ ಪ್ರಸಿದ್ಧರಾಗಿದ್ದ ಭಾಗವತರ ನಿಧನದಿಂದ ಯಕ್ಷ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.ಓಂ ಶಾಂತಿ” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ರಾತ್ರಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು.
ಭಾಗವತಿಕೆ ಭೀಷ್ಮ ಎಂದೇ ಖ್ಯಾತರಾದ ಬಲಿಪ ನಾರಾಯಣ ಭಾಗವತರು (86) ಗುರುವಾರ ಸಂಜೆ 6.30ರ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾರೂರು ಗ್ರಾಮದ ನೂಯಿಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.