ಒಂದು ವರ್ಷದ ಹಿಂದೆ ಕೊಲೆಯಾಗಿದ್ದಳು ಎನ್ನಲಾದ ಯುವತಿ ಪ್ರಿಯಕರನ ಜತೆ ಪತ್ತೆ!
Team Udayavani, Aug 9, 2020, 12:12 PM IST
ಲಕ್ನೋ: ಒಂದೂವರೆ ವರ್ಷಗಳ ಹಿಂದೆ ಕೊಲೆಯಾಗಿದ್ದಳು ಎಂದು ನಂಬಲಾಗಿದ್ದ ಯುವತಿ ಪ್ರಿಯಕರನ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಉತ್ತರ ಪ್ರದೇಶದ ಅನ್ರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಲಾಪುರ ಗ್ರಾಮದಲ್ಲಿ 2019ರ ಫೆ.6ರಂದು ಕಮಲೇಶ್ ಎಂಬ ಯುವತಿ ಕಾಣಿಯಾಗಿದ್ದಳು. ಈ ಕುರಿತು ಆಕೆಯ ಸಹೋದರ ರಾಹುಲ್ ಪೊಲೀಸರಿಗೆ ದೂರು ನೀಡಿದ್ದರು.
2019ರ ಫೆ.18ರಂದು ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕಮಲೇಶ್ಳ ತಂದೆ ಸುರೇಶ್ ಹಾಗೂ ಆಕೆಯ ಸಹೋದರ ರೂಪ್ ಕಿಶೋರ್ ಸೇರಿದಂತೆ ಮೂವರನ್ನು ಜೈಲಿಗೆ ಕಳುಹಿಸಲಾಗಿತ್ತು. ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಓಡಿ ಹೋಗಿ ಸಹ ಜೀವನ ನಡೆಸುತ್ತಿದ್ದಾಳೆ. ಈ ಜೋಡಿಗೆ ಮಗು ಕೂಡ ಇದೆ. ಯುವತಿಯ ತಂದೆ, ಸಹೋದರನನ್ನು ಜೈಲಿನಲ್ಲಿರಿಸಿರುವುದು ವಿವಾದಕ್ಕೆ ಗುರಿಯಾಗಿದೆ. ಈ ಕುರಿತು ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಯುವತಿಯ ಪೋಷಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.