Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು
Team Udayavani, Jan 11, 2025, 1:08 AM IST
ಸಿದ್ದಾಪುರ: ಮಡಾಮಕ್ಕಿ ಗ್ರಾಮದ ಶಿರಂಗೂರು ಎನ್ನುವಲ್ಲಿ ಆವರಣ ವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸತೀಶ್ (47) ಅವರು ಸಾವನ್ನಪ್ಪಿದ ಘಟನೆ ಜ. 9ರಂದು ರಾತ್ರಿ ಸಂಭವಿಸಿದೆ.
ಸತೀಶ ಅವರು ತಾಯಿ ಗಂಗಮ್ಮ ಅವರೊಂದಿಗೆ ಶಿರಂಗೂರಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಜ. 9ರ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದು, ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋದವರು ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಸಂಬಂಧಿ ಸಂದೇಶ ಅವರು ನೀಡಿದ ದೂರಿನಂತೆ ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವು ಕಚ್ಚಿ ಸಾವು
ಸಿದ್ದಾಪುರ: ಆಜ್ರಿ ಗ್ರಾಮದ ಹನಬಚ್ಚಲು ಎಂಬಲ್ಲಿ ವಿಷದ ಕಾವು ಕಚ್ಚಿ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಗೌರಿ (72) ತೋಟದಲ್ಲಿ ಹುಲ್ಲು ತೆಗೆಯುತ್ತಿದ್ದಾಗ ವಿಷದ ಹಾವು ಕಚ್ಚಿತ್ತು. ಕೂಡಲೇ ಅವರನ್ನು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದಲ್ಲಿ ದಾಖಲಾಗಿದ್ದು, ಮುಂದುವರಿದ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆ ಮಣಿಪಾಲಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದ ಗೌರಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.