Madhya Pradesh: ಸವಾಯ್ ಮಾಧೋಪುರದಲ್ಲಿ ಜಯ ಯಾರಿಗೆ?
Team Udayavani, Nov 17, 2023, 11:28 PM IST
ಮಧ್ಯಪ್ರದೇಶದ ಮತದಾನ ಮುಕ್ತಾಯವಾಗುತ್ತಿರುವಂತೆಯೇ ರಾಜಸ್ಥಾನದಲ್ಲಿ ನ.25ರಂದು ನಡೆಯಲಿರುವ ಮತದಾನಕ್ಕೆ ಪ್ರಚಾರ ಬಿರುಸಾಗಿಯೇ ಮುಂದುವರಿದಿದೆ. ಮರುಭೂಮಿ ರಾಜ್ಯದ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಸವಾಯ್ ಮಾಧೋಪುರ ದಲ್ಲಿ ಯಾವುದೇ ಅಭ್ಯರ್ಥಿ ಗೆಲ್ಲಬೇಕಾದರೆ ಜಾತಿ ಸಮೀಕರಣದ ಮೂಲಕವೇ ಆಗಬೇಕು. ಬಿಜೆಪಿಯ ರಾಜ್ಯಸಭಾ ಸದಸ್ಯ ಕಿರೋಡಿ ಲಾಲ್ ಮೀನಾ, ಕಾಂಗ್ರೆಸ್‌ನ ಹಾಲಿ ಶಾಸಕ ದಿನೇಶ್ ಅಬ್ರಾರ್ ಜತೆಗೆ ಟಿಕೆಟ್ ಕೊಡಲಿಲ್ಲ ಎಂದು ಬಿಜೆಪಿಯ ಬಂಡಾಯ ಅಭ್ಯರ್ಥಿ ಅಶಾ ಮೀನಾ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಮೀನಾ, ಮುಸ್ಲಿಂ, ಗುಜ್ಜರ್ ಸಮುದಾಯದವರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಪೈಕಿ ಮೀನಾ ಸಮುದಾಯದವರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಕಿರೋಡಿ ಲಾಲ್ ಮೀನಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯ ಈ ಪ್ರಯೋಗ ಸಫಲವಾಗಲಿದೆಯೋ ಇಲ್ಲವೋ ಎನ್ನುವುದನ್ನು ಡಿ.3ರ ಫಲಿತಾಂಶದ ದಿನ ಗೊತ್ತಾಗಲಿದೆ.
ಕಾಂಗ್ರೆಸ್ ಶಾಸಕ ಅಬ್ರಾರ್ ಅವರು 2020ರಲ್ಲಿ ಶಾಸಕ ಸಚಿನ್ ಪೈಲಟ್‌ಗೆ ಬೆಂಬಲ ನೀಡದೇ ಇದ್ದದ್ದು ಗುಜ್ಜರ್ ಸಮುದಾಯದ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ ಆ ಸಮುದಾಯ ಕಾಂಗ್ರೆಸ್ ವಿರುದ್ಧ ಮತ ಹಾಕುತ್ತದೆಯೋ ಎಂಬ ಜಿಜ್ಞಾಸೆ ವ್ಯಕ್ತವಾಗಿದೆ. ಬಿಜೆಪಿ ಅಭ್ಯರ್ಥಿ ಕಿರೋಡಿ ಲಾಲ್ ಮೀನಾ ಕ್ಷೇತ್ರದಲ್ಲಿ ಸತತವಾಗಿ ಪ್ರವಾಸ ಮಾಡಿದ್ದಾರೆ ಮತ್ತು ಅಶೋಕ್ ಗೆಹ್ಲೋಟ್ ಸರಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಾರೆ. ಸಿಎಂ ಗೆಹ್ಲೋಟ್ ಅವರ ಕುತಂತ್ರದಿಂದಲೇ ಬಿಜೆಪಿಯ ಬಂಡಾಯ ಅಭ್ಯರ್ಥಿ ಕಣಕ್ಕೆ ಇಳಿದಿದ್ದಾರೆ ಎನ್ನುವುದು ಮೀನಾ ಅವರ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.