Madikeri Dasara 2024: ಪೊಲೀಸರಿಂದ ಬಿಗಿ ಬಂದೋಬಸ್ತ್
Team Udayavani, Oct 9, 2024, 1:03 AM IST
ಮಡಿಕೇರಿ: ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವ ಮತ್ತು ದಕ್ಷಿಣ ಕೊಡಗಿನ ಗೋಣಿಕೊಪ್ಪಲು ದಸರಾ ಉತ್ಸವದಲ್ಲಿ ಕಾನೂನು ಸುವ್ಯವಸ್ಥೆಗಳನ್ನು ಕಾಪಾಡುವ ನಿಟ್ಟಿನಲ್ಲಿ 2 ಸಾವಿರ ಪೊಲೀಸ್ ಅಧಿಕಾರಿ ಮತ್ತು ಸಿಬಂದಿ ನಿಯೋಜಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದಸರಾ ಉತ್ಸವವನ್ನು ಶಾಂತಿಯುತವಾಗಿ ಆಚರಿಸುವ ಸಲುವಾಗಿ ಇಬ್ಬರು ಎಎಸ್‌ಪಿ, 7 ಡಿವೈಎಸ್‌ಪಿ, 27 ವೃತ್ತ ನಿರೀಕ್ಷಕರು, 80 ಪಿಎಸ್‌ಐ, 126 ಎಎಸ್‌ಐ, 975 ಪೊಲೀಸ್ ಸಿಬಂದಿ, 360 ಗೃಹ ರಕ್ಷಕ ದಳದ ಸಿಬ್ಬಂದಿಗಳು ಸೇರಿದಂತೆ 16 ಡಿಎಆರ್, 8 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ಅಗತ್ಯ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ ಎಂದರು.
8 ‘ಜಂಬೋ’ ತಂಡ
ಮಡಿಕೇರಿ ದಸರಾ ಉತ್ಸವದ ಶೋಭಾಯಾತ್ರೆಯ ಸಂದರ್ಭ ಜನಸಂದಣಿ ಹೆಚ್ಚಾಗಿರುವ ಕಡೆ ಕಿಡಿಗೇಡಿಗಳ ಬಗ್ಗೆ ನಿಗಾ ಇಡಲು ಒಬ್ಬರು ಎಸ್‌ಐ ನೇತ್ಥತ್ವದ 15 ಜನ ಸಿಬಂದಿಗಳನ್ನು ಒಳಗೊಂಡ 8 ಜಂಬೋ ತಂಡಗಳನ್ನು ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.