Madikeri: ಇಂದು ಕರಗೋತ್ಸವ ಆರಂಭ


Team Udayavani, Oct 15, 2023, 12:03 AM IST

karaga

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ನಗರ ದಸರಾ ಸಮಿತಿ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ, ಅ.15ರಂದು ನಗರದ ಪಂಪಿನ ಕೆರೆಯಲ್ಲಿ 4 ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ ಕರಗ ಹೊರಡಿಸುವ ಮೂಲಕ ಮಡಿಕೇರಿ ದಸರಾ ಉತ್ಸವ ಆರಂಭವಾಗಲಿದೆ. ನವ ದಿನಗಳು ಕೂಡ ಕರಗಗಳು ನಗರ ಪ್ರದಕ್ಷಿಣೆಗೆ ತೆರಳಲಿವೆ ಎಂದು ಹೇಳಿದರು. ಕರಗಗಳು ಮತ್ತು ದಶ ಮಂಟಪಗಳು ಸಾಗುವ ನಗರದ ಮುಖ್ಯ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಕಾಡು ಕಡಿದು ಸ್ವತ್ಛಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪೊಲೀಸ್‌ ಕಣ್ಗಾವಲು
ಮಡಿಕೇರಿ ದಸರಾ ಉತ್ಸವಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡಲು ಜನದಟ್ಟಣೆ ಏರ್ಪಡುವ ಸ್ಥಳಗಳಲ್ಲಿ ಪೊಲೀಸ್‌ ವ್ಯೂವ್‌ ಪಾಯಿಂಟ್‌ ಅಳವಡಿಸುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ ಪೊಲೀಸ್‌ ಇಲಾಖೆ ಸೂಚಿಸುವ ಕಡೆಗಳಲ್ಲಿ ಎಲ್ಲ ರೀತಿಯ ಭದ್ರತಾ ವ್ಯವಸ್ಥೆಗಳನ್ನು ನಗರ ಸಭೆ ಕಡೆಯಿಂದ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮಂಟಪಕ್ಕೆ ವಿಶೇಷ ಬಹುಮಾನ
ಅ.24ರ ರಾತ್ರಿ ದಶಮಂಟಪಗಳು ನಗರದಲ್ಲಿ ಶೋಭಾ ಯಾತ್ರೆ ನಡೆಸುತ್ತವೆ. ಈ ವೇಳೆ ಎಲ್ಲಾ ದಶ ಮಂಟಪಗಳು ಹೆಚ್ಚು ಪ್ರದರ್ಶನ ನೀಡಬೇಕೆಂದು ಸೂಚಿಸಲಾಗಿದೆ. ಮಾತ್ರವಲ್ಲದೇ ಹೆಚ್ಚು ಪ್ರದರ್ಶನ ನೀಡುವ ಮಂಟಪಕ್ಕೆ ವಿಶೇಷ ಬಹುಮಾಣವನ್ನು ದಸರಾ ಸಮಿತಿ ಯಿಂದ ನೀಡಲಾಗುತ್ತದೆ ಎಂದು ಅನಿತಾ ಪೂವಯ್ಯ ತಿಳಿಸಿದರು.

ಹೆಚ್ಚಿನ ಅನುದಾನಕ್ಕೆ ಪ್ರಯತ್ನ
ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್‌ ಆಚಾರ್ಯ ಮಾತನಾಡಿ, ಅ.15ರಂದು 4 ಶಕ್ತಿ ದೇವತೆಗಳ ಆಶೀರ್ವಾದ ಪಡೆದು ದಸರಾ ಆಚರಣೆ ಸುಸೂತ್ರವಾಗಿ ನಡೆಯಲೆಂದು ಪ್ರಾರ್ಥಿಸಲಾಗುತ್ತದೆ ಎಂದು ಹೇಳಿದರು.

ಈ ಬಾರಿ 2 ಕೋಟಿ ರೂ. ಅನುದಾನದ ಮೂಲಕ ಮಡಿಕೇರಿ ದಸರಾವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಚಿಂತಿಸಲಾಗಿತ್ತು. ಆದರೆ ಬರದ ಹಿನ್ನೆಲೆಯಲ್ಲಿ ಸರಕಾರ 75 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ದಾನಿಗಳ ಮೂಲಕ ದೇಣಿಗೆ ಸಂಗ್ರಹಿಸಲು ದಸರಾ ಸಮಿತಿ ಮುಂದಾಗಿದ್ದು, ಈ ಹಣದಲ್ಲಿ ದಶ ಮಂಟಪಗಳಿಗೆ ಹೆಚ್ಚಿನ ಅನುದಾನ ನೀಡಲು ಯೋಜನೆ ರೂಪಿಸಲಾಗುತ್ತಿದೆ. ದೇಣೆಗೆ ಸಂಗ್ರಹದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ನಗರ ಸಭೆ ಪೌರಾಯುಕ್ತರೇ ದೇಣಿಗೆ ವಿಚಾರದ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಅ.15ರಂದು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು ಕರಗ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ. ದಸರಾಗೆ ಹೆಚ್ಚಿನ ಅನುದಾನ ಒದಗಿಸಲು ಕೋರಲಾಗುವುದು ಎಂದರು.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.