ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ರದ್ದು
ಕಮಲ್ ಪಂತ್ ಸಹಿತ ಮೂವರು ಅಧಿಕಾರಿಗಳ ವಿರುದ್ಧ ತನಿಖೆ
Team Udayavani, Dec 15, 2021, 5:10 AM IST
ಬೆಂಗಳೂರು: ಅಶ್ಲೀಲ ಸಿ.ಡಿ. ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಆಧರಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಹಿತ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಮಾರುತಿ ಸಲ್ಲಿಸಿರುವ ಅರ್ಜಿ
ಯನ್ನು ವಿಚಾರಣೆ ನಡೆಸಿದ ನ್ಯಾ| ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯ ಪೀಠ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿತು.
ವಾಸ್ತವ ಸಂಗತಿಗಳನ್ನು 8ನೇ ಎಸಿಎಂಎಂ ಕೋರ್ಟ್ ಗಮನಕ್ಕೆ ತಾರದೆ ದೂರು ದಾಖಲಿಸ ಲಾಗಿದೆ. ಹೀಗಿರುವಾಗ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸದೆ ಪೊಲೀಸ್ ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ್ದಾರೆ ಎಂಬ ನಿರ್ಧಾರಕ್ಕೆ ಬಂದು, ಅವರ ವಿರುದ್ಧ ತನಿಖೆಗೆ ಆದೇಶಿಸಿರುವ ಮ್ಯಾಜಿಸ್ಟ್ರೇಟ್ ಕ್ರಮ ಸರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಇದನ್ನೂ ಓದಿ:ಪ್ರವಾಹ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ: ಸಿದ್ದರಾಮಯ್ಯ
ಒಬಿಸಿ ಪಟ್ಟಿಯಲ್ಲಿ ಕೊಡವ-ಕೊಡವರು: ಮೂರು ತಿಂಗಳಲ್ಲಿ ಕ್ರಮಕ್ಕೆ ಆದೇಶ
ಬೆಂಗಳೂರು: ಹಿಂದುಳಿದ ವರ್ಗಗಳ ಪಟ್ಟಿಯ ಕ್ರಮ ಸಂಖ್ಯೆ- 2ರಲ್ಲಿ ಉಲ್ಲೇಖಿಸಿರುವ “ಕೊಡಗರು’ ಪದವನ್ನು ತೆಗೆದುಹಾಕಿ “ಕೊಡವ ಅಥವಾ ಕೊಡವರು’ ಎಂಬುದಾಗಿ ಸೇರಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಮಾಡಿರುವ ಶಿಫಾರಸು ಹಾಗೂ ಸಲಹೆಯನ್ನು ಅಂಗೀಕರಿಸಿ 3 ತಿಂಗಳಲ್ಲಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಈ ಸಂಬಂಧ 2015ರ ಅ.15 ಮತ್ತು 2021ರ ಸೆ.30ರಂದು ಹೊರಡಿಸಿದ್ದ ಎರಡೂ ಆದೇಶಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಒಪ್ಪಲು ನಿರಾಕರಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಕೃಷ್ಣ .ಎಸ್.ದೀಕ್ಷಿತ್ ಅವರ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.