ಮಹಾದಾಯಿಗೆ ಮತ್ತೆ ಗೋವಾ ಕ್ಯಾತೆ : ಸಾವಂತ್ ಬೇಡಿಕೆಗೆ ಬಗ್ಗದ ಕೇಂದ್ರ
Team Udayavani, Aug 9, 2020, 10:26 AM IST
ಪಣಜಿ: ಕಳಸಾ-ಬಂಡೂರಿ, ಮಹಾದಾಯಿ ಯೋಜನೆ ಕಾಮಗಾರಿ ಆರಂಭಿಸಲು ಕರ್ನಾಟಕಕ್ಕೆ ಅನುಮತಿ ನೀಡುವ ಮೊದಲು ನಮ್ಮ ಆಕ್ಷೇಪಣೆಯನ್ನೂ ಪರಿಗಣಿಸ ಬೇಕೆಂದು ಗೋವಾ ಮತ್ತೆ ಕ್ಯಾತೆ ತೆಗೆದಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಗಜೇಂದ್ರಸಿಂಗ್ ಶೇಖಾವತ್, ಮಹಾದಾಯಿ ಯೋಜನೆ ಆರಂಭಕ್ಕೆ ಬೇರೆ ರಾಜ್ಯಗಳ ಒಪ್ಪಿಗೆ ಪಡೆದುಕೊಳ್ಳುವ ಯಾವುದೇ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಬೆಳಗಾವಿಯ ಖಾನಾಪುರ ತಾಲೂಕಿನ ಕಳಸಾ-ಬಂಡೂರಿ ಯೋಜನೆ ವಿಷಯದಲ್ಲಿ ಗೋವಾದ ಆಕ್ಷೇಪವಿದೆ. ಗೋವಾಕ್ಕೆ ಸೂಚನೆ ನೀಡದೆ ಅಥವಾ ಗೋವಾದ ಆಕ್ಷೇಪ ಪರಿಗಣಿಸದೆ ಕರ್ನಾಟಕದ ಈ ಯೋಜನೆಗೆ ಅನುಮತಿ ನೀಡಬಾರದು. ಕರ್ನಾಟಕ ಸರಕಾರವು ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿ ಯೋಜನೆ ವರದಿ ಸಾದರಪಡಿಸಿದ್ದರೆ ಅದರ ಪ್ರತಿ ಗೋವಾ ಸರಕಾರಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಗೋವಾದ ಪತ್ರವನ್ನು ಕೇಂದ್ರ ದಾಖಲಿಸಿಕೊಂಡಿದೆ. ಈ ಕುರಿತು ಗೋವಾ ಸಿಎಂಗೆ ಮರು ಪತ್ರ ಬರೆದಿರುವ ಗಜೇಂದ್ರ ಸಿಂಗ್, ಕರ್ನಾಟಕವು ಕಳಸಾ – ಬಂಡೂರಿ ಯೋಜನೆ ಕಾಮಗಾರಿಗೆ ವಿವಿಧ ಅನುಮತಿ ಪಡೆಯಬೇಕಿದೆ. ಆದರೆ ಇದಕ್ಕೆ ಬೇರೆ ರಾಜ್ಯಗಳ ಅನುಮತಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.